ಗಾಂಧಿನಗರ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ 15 ಕೋಟಿ ರೂ. ನಗದು ಪತ್ತೆ ಬೆನ್ನಲ್ಲೇ ಅವರನ್ನು ಅಲಹಾಬಾದ್ ಹೈಕೋರ್ಟ್‍ಗೆ ವರ್ಗ ಮಾಡಲಾಗಿದೆ. ಇದಕ್ಕೆ ಅಲಹಾಬಾದ್ ಹೈಕೋರ್ಟ್ ವಕೀಲರು ಗರಂ ಆಗಿದ್ದಾರೆ.
ಅಲಹಾಬಾದ್ ಹೈಕೋರ್ಟ್ ಕಸದ ಬುಟ್ಟಿನಾ ಎಂದು ವಕೀಲರು ಪ್ರಶ್ನಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್ ಸಿಜೆ ಮತ್ತು ಇತರೆ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿರುವ ಬಾರ್ ಕೌನ್ಸಿಲ್ (Allahabad HC bar Association), ಕೊಲಿಜಿಯಂ ನಿರ್ಧಾರ ಅಚ್ಚರಿ ತಂದಿದೆ. ಹಲವು ಪ್ರಶ್ನೆ ಹುಟ್ಟು ಹಾಕಿದೆ. ಈ ಬೆಳವಣಿಗೆ ಕಳವಳಕಾರಿ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಇದನ್ನೂ ಓದಿ: ಕಂತೆ ಕಂತೆ ನೋಟು ಪತ್ತೆಯಾದ ಜಡ್ಜ್ ಮೇಲೆ ದಾಖಲಾಗಿತ್ತು ಸಿಬಿಐ ಎಫ್‌ಐಆರ್
ಅಲಹಾಬಾದ್ ಹೈಕೋರ್ಟ್ ವಿಭಜಿಸುವ ಪಿತೂರಿಯೂ ನಡೆದಿದೆ ಎಂದು ಆರೋಪಿಸಿರುವ ಬಾರ್ ಕೌನ್ಸಿಲ್, ಸೋಮವಾರ ಸಭೆ ನಡೆಸಲಿದೆ. ಅಂದ ಹಾಗೇ, ಉತ್ತರಪ್ರದೇಶದ ಸಕ್ಕರೆ ಕಾರ್ಖಾನೆಯೊಂದಕ್ಕೆ ಸಂಬಂಧಿಸಿದ ಕೇಸಲ್ಲಿ ಇದೇ ನ್ಯಾಯಮೂರ್ತಿ ವಿರುದ್ಧ ಸಿಬಿಐ 2018ರಲ್ಲಿ ಎಫ್‍ಐಆರ್ ದಾಖಲಿಸಿದ್ದ ವಿಚಾರ ಬಹಿರಂಗಗೊಂಡಿದೆ.
ಈ ಬೆಳವಣಿಗೆ ನಡುವೆಯೇ ನ್ಯಾ. ವರ್ಮಾ (Justice Yashwant Varma) ಅವರ ನಿವಾಸದಲ್ಲಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ಸಮಯದಲ್ಲಿ ಯಾವುದೇ ನಗದು ಪತ್ತೆಯಾಗಿಲ್ಲ ಎಂದು ನಾನು ಹೇಳಿಲ್ಲ ಎಂದು ದೆಹಲಿ ಅಗ್ನಿಶಾಮಕ ದಳದ (ಡಿಎಫ್‌ಎಸ್) ಮುಖ್ಯಸ್ಥ ಅತುಲ್ ಗರ್ಗ್ (Atul Garg) ಸ್ಪಷ್ಟಪಡಿಸಿದ್ದಾರೆ.
ಗುರುವಾರ ರಾತ್ರಿ ನಡೆದ ಅಗ್ನಿ ಅವಘಡದ ಸಂದರ್ಭದಲ್ಲಿ ನ್ಯಾಯಮೂರ್ತಿ ವರ್ಮಾ ಅವರ ಮನೆಯಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದಾದ ಬಳಿಕ ಸುಪ್ರೀಂ ಕೋರ್ಟ್ (Supreme Court) ಕೊಲಿಜಿಯಂ ಇಡೀ ಘಟನೆಯ ಬಗ್ಗೆ ತನಿಖೆ ಆರಂಭಿಸಿದೆ. ಇದನ್ನೂ ಓದಿ: ಜಡ್ಜ್ ಮನೆಯಲ್ಲಿ ಹಣ ಸಿಕ್ಕಿಲ್ಲ ಎಂದು ಹೇಳೇ ಇಲ್ಲ, ನನ್ನ ಹೆಸರು ಯಾಕೆ ಉಲ್ಲೇಖಿಸಿದ್ದಾರೆ ಗೊತ್ತಿಲ್ಲ ಎಂದ ಅಗ್ನಿಶಾಮಕ ದಳದ ಮುಖ್ಯಸ್ಥ