ಬೆಳಗಾವಿ: ಹಿರೇಕೋಡಿಯ ಜೈನ ಮುನಿಗಳ (Jain Monk) ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ (G.Parameshwara) ಹೇಳಿದ್ದಾರೆ.
ಬೆಳಗಾವಿ (Belagavi) ತಾಲೂಕಿನ ಹಲಗಾ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದುರ್ಘಟನೆ ನಡೆಯಬಾರದಿತ್ತು. ಇದರಿಂದ ನನಗೆ ಬಹಳ ನೋವಾಗಿದೆ. ಒಬ್ಬ ಸ್ವಾಮೀಜಿ, ಸಂತ ಯಾವುದೇ ಅಪೇಕ್ಷೆ ಇಲ್ಲದೇ ಜೀವನ ನಡೆಸುತ್ತಾರೆ. ಅಂಥವರಿಗೆ ಯಾವುದೇ ಕಾರಣಕ್ಕೂ ಹೀಗೆ ಆಗಬಾರದು ಎಂದಿದ್ದಾರೆ. ಇದನ್ನೂ ಓದಿ: ಇಸ್ರೋ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‍ಗೆ ಹೃದಯಾಘಾತ
ನಮ್ಮ ರಾಜ್ಯದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಬಂಧಿಸಿತರ ವಿರುದ್ಧ ಈಗಾಗಲೇ ತನಿಖೆ ಆರಂಭವಾಗಿದೆ. ಯಾರೂ ಉದ್ರೇಕಗೊಳ್ಳಬಾರದು. ಎಲ್ಲವನ್ನೂ ಕಾನೂನು ನೋಡಿಕೊಳ್ಳಲಿದೆ ಎಂದಿದ್ದಾರೆ.
ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ನಮ್ಮ ಸರ್ಕಾರ ಎಲ್ಲರಿಗೂ ರಕ್ಷಣೆ ಕೊಡುತ್ತದೆ. ಹುಬ್ಬಳ್ಳಿಯ ಗುಣಧರನಂದಿ ಮಹಾರಾಜರ ಎಲ್ಲಾ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೇನೆ. ಈ ಮೂಲಕ ಎಲ್ಲಾ ಸಮುದಾಯದ ಸಾಧು ಸಂತರಿಗೆ ನಾನು ಭರವಸೆ ನೀಡುತ್ತೇನೆ. ಮುನಿಗಳು ಧರ್ಮಪ್ರಚಾರಕ್ಕೆ ನಡೆದುಕೊಂಡು ಹೋಗುವ ವೇಳೆ ಭದ್ರತೆ ನೀಡುತ್ತೇವೆ. ಜೈನ ಸಮುದಾಯಕ್ಕೆ ಮಂಡಳಿ ಮಾಡಿಕೊಳ್ಳಲು ಕೋರಿದ್ದಾರೆ. ಅದಕ್ಕೂ ನಮ್ಮ ಸರ್ಕಾರ ಬದ್ಧವಿದೆ. ನಾನು ಕೂಡ ಹಿರೇಕೋಡಿಯ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ.
ಚಿಕ್ಕೋಡಿಗೆ ಎಡಿಜಿಪಿ ಆರ್. ಹಿತೇಂದ್ರ ಅವರನ್ನು ಕಳುಹಿಸಲಾಗಿದೆ. ಅವರೂ ಘಟನೆಯ ಎಲ್ಲಾ ಮಾಹಿತಿ ಪಡೆದಿದ್ದಾರೆ. ನಮ್ಮದು ಸರ್ವಜನಾಂಗದ ಶಾಂತಿಯ ತೋಟ, ರಾಜ್ಯದಲ್ಲಿ ಶಾಂತಿ ನೆಲೆಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕರಿಗೆ ಡ್ರೆಸ್ ಕೋಡ್ ಚರ್ಚಿಸಿ ತೀರ್ಮಾನ: ಮಧು ಬಂಗಾರಪ್ಪ
Web Stories