ಬೆಂಗಳೂರು: ನ್ಯಾಷನಲ್ ಹೆರಾಲ್ಡ್ (National Herald Case) ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ನೀಡಿದ್ದು, ಆದರೆ ಇಂದು ವಿಚಾರಣೆಗೆ ಹಾಜರಾಗಲು ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಇಡಿ (ED) ವಿಚಾರಣೆಗೆ ದೆಹಲಿಗೆ ಹೋಗಬೇಕಿತ್ತು. ಆದರೆ ನಿನ್ನೆ ಖರ್ಗೆಯವರ ಕಾರ್ಯಕ್ರಮ ಇತ್ತು. ಇಂದು ವಿನಯ್ ಕುಲಕರ್ಣಿಯವರ ಪೂರ್ವ ನಿಯೋಜಿತ ಕಾರ್ಯಕ್ರಮವಿದೆ. ಆದ್ದರಿಂದ ಇಡಿ ವಿಚಾರಣೆಗೆ ಹಾಜರಾಗಲು ಆಗಲ್ಲ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ ಎಂದು ಮನವಿ ಮಾಡಿದ್ದೇನೆ. ಸಂಸದ ಡಿ.ಕೆ.ಸುರೇಶ್ (D.K Suresh) ಇಂದು ಇಡಿ ವಿಚಾರಣೆಗೆ ಹಾಜರಾಗ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮುಂಬೈ, ಥಾಣೆ ನಡುವೆ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಪ್ಲಾನ್: ಏಕನಾಥ್ ಶಿಂಧೆ
Advertisement
Advertisement
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಡಿಕೆ ಬ್ರದರ್ಸ್‍ಗೆ ಸಮನ್ಸ್ ನೀಡಿತ್ತು. ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಇಂದು ಕಿತ್ತೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಡಿಕೆಶಿ ಇಂದು ವಿಚಾರಣೆಗೆ ಗೈರಾಗಲಿದ್ದಾರೆ. ಅಲ್ಲದೆ ಬೇರೆ ದಿನಾಂಕ ನಿಗದಿಗೆ ಇ-ಮೇಲ್ ಮೂಲಕ ಇಡಿಗೆ ಮನವಿ ಮಾಡಿದ್ದಾರೆ. ಇಂದು ಸಂಸದ ಡಿಕೆ.ಸುರೇಶ್ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.