ಹುಟ್ಟು ಹಬ್ಬ ಆಚರಿಸಿಕೊಳ್ಳಲ್ಲ: ಯುವ ಫ್ಯಾನ್ಸಿಗೆ ನಿರಾಸೆ

Public TV
2 Min Read
Yuvaraj kumar 1

ನಾಳೆ ನಟ ಯುವರಾಜ್ ಕುಮಾರ್ ಹುಟ್ಟು ಹಬ್ಬ. ಇವರ ನಟನೆಯ ಯುವ ಸಿನಿಮಾ ಕೂಡ ಗೆಲುವು ಸಾಧಿಸಿದ್ದರಿಂದ, ಅದ್ದೂರಿಯಾಗಿಯೇ ನಟನ ಹುಟ್ಟು ಹಬ್ಬವನ್ನು (Birthday) ಆಚರಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಆದರೆ, ಅಭಿಮಾನಿಗಳಿಗೆ ನಿರಾಸೆಯಾಗಿದೆ. ತಾವು ಆ ದಿನದಂದು ಮನೆಯಲ್ಲಿ ಇರೋದಿಲ್ಲ. ಹಾಗಾಗಿ ನೀವು ಇದ್ದಲ್ಲಿಂದಲೇ ಹಾರೈಸಿ ಎಂದು ಯುವರಾಜ್ ಕುಮಾರ್ ವಿಡಿಯೋ ಮಾಡಿದ್ದಾರೆ.

yuva rajkumar 1

ಚುನಾವಣೆ ಮತ್ತು ಇತರ ಕಾರಣಗಳಿಂದಾಗಿ ಈ ಬಾರಿ ಯುವ ರಾಜ್ ಕುಮಾರ್, ಮನೆಯಲ್ಲಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎನ್ನುವ ಮಾಹಿತಿ ಸಿಕ್ಕಿದೆ. ಮನೆಯಲ್ಲಿ ಅಂದು ಇರೋದಿಲ್ಲವೆಂದದು ಸ್ವತಃ ಯುವರಾಜ್ ಅವರೇ ವಿಡಿಯೋ ಸಂದೇಶ ಕಳುಹಿಸಿದ್ದಾರೆ.

Yuva 1

ಯುವ ಗೆಲುವು

ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ (Yuvaraj Kumar) ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ  ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ (Success) ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ರಾಜ್ಯದ ಜನತೆ “ಯುವ” (Yuva) ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈಗಲೂ ಜನ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಕನ್ನಡ ಕಲಾರಸಿಕರಿಗೆ, ಮಾಧ್ಯಮದವರಿಗೆ, ಹೊಂಬಾಳೆ ಫಿಲಂಸ್ ಸಂಸ್ಥೆಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

 

ಜನರು ನನ್ನ ಮೊದಲ ಚಿತ್ರಕ್ಕೆ ತೋರುತ್ತಿರುವ ಒಲವಿಗೆ ಮನ ತುಂಬಿ ಬಂದಿದೆ ಎಂದು ಮಾತನಾಡಿದ ನಾಯಕ ಯುವ ರಾಜಕುಮಾರ್, ಪ್ರಥಮವಾಗಿ ನಾನು ನನಗೆ ಅವಕಾಶ ನೀಡಿದ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅವರಿಗೆ, ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ನನ್ನ ಸಹ ಕಲಾವಿದರ ಹಾಗೂ ತಂತ್ರಜ್ಞರ ಪ್ರೋತ್ಸಾಹವನ್ನು ಈ ಸಮಯದಲ್ಲಿ ನೆನೆಯುತ್ತೇನೆ. ಮೊದಲ ಚಿತ್ರದಲ್ಲಿ ನನ್ನಿಂದೇನಾದರೂ ಸಣ್ಣಪುಟ್ಟ ತಪ್ಪಾಗಿದ್ದರೆ ಮುಂದಿನ ಚಿತ್ರಗಳಲ್ಲಿ ಸರಿ ಪಡಿಸಿಕೊಳ್ಳುತ್ತೇನೆ. ಜನ ಫ್ಯಾಮಿಲಿ ಸಮೇತ ಬಂದು ಚಿತ್ರವನ್ನು ನೋಡುತ್ತಿರುವುದು ಬಹಳ ಖುಷಿಯಾಗಿದೆ. ಈ ಮೂಲಕ ರಾಜ್ಯದ ಜನತೆಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು.

Share This Article