Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎತ್ತಿನಹೊಳೆ ಯೋಜನೆಯಲ್ಲಿ ನಾನು ರಾಜಕೀಯ ಮಾಡಲು ಹೋಗುವುದಿಲ್ಲ: ಡಾ.ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎತ್ತಿನಹೊಳೆ ಯೋಜನೆಯಲ್ಲಿ ನಾನು ರಾಜಕೀಯ ಮಾಡಲು ಹೋಗುವುದಿಲ್ಲ: ಡಾ.ಕೆ.ಸುಧಾಕರ್

Bengaluru City

ಎತ್ತಿನಹೊಳೆ ಯೋಜನೆಯಲ್ಲಿ ನಾನು ರಾಜಕೀಯ ಮಾಡಲು ಹೋಗುವುದಿಲ್ಲ: ಡಾ.ಕೆ.ಸುಧಾಕರ್

Public TV
Last updated: September 6, 2024 7:12 pm
Public TV
Share
4 Min Read
K SUDHAKAR
SHARE

– ಯೋಜನೆಯನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ದಿದ್ದಕ್ಕೆ ಡಿಕೆಶಿಗೆ ಅಭಿನಂದನೆ
– ಕೋವಿಡ್ ವರದಿಯಲ್ಲಿ ಅಧಿಕಾರಿಗಳ ವ್ಯಾಖ್ಯಾನ ಕಾದು ನೋಡೋಣ

ಬೆಂಗಳೂರು: ಎತ್ತಿನಹೊಳೆ ಯೋಜನೆಯಲ್ಲಿ (Yettinahole Project) ನಾನು ಯಾವುದೇ ಕಾರಣಕ್ಕೂ ರಾಜಕೀಯ ಮಾಡಲು ಹೋಗುವುದಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ (yettinahole project) ಹೇಳಿದ್ದಾರೆ.

ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಇಂದು ಚಾಲನೆ ನೀಡಿದ ಹಿನ್ನೆಲೆ ನಗರದಲ್ಲಿ (Bengaluru) ಮಾತನಾಡಿದ ಅವರು, 2014 ರಲ್ಲಿ ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ನನ್ನ ಅಧ್ಯಕ್ಷತೆಯಲ್ಲೇ ಶಂಕುಸ್ಥಾಪನೆ ಮಾಡಿದರು. ಇವತ್ತು ಯೋಜನೆಯ ಮೊದಲ ಹಂತದ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನಗೆ ವೈಯಕ್ತಿಕವಾಗಿ ಆಹ್ವಾನ ಕೊಟ್ಟಿದ್ದರು. ನಾನು ಅವರಿಗೆ ಆಭಾರಿ ಆಗಿರುತ್ತೇನೆ ಎಂದು ಹೇಳಿದರು.

ಈಗ ಎತ್ತಿನಹೊಳೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತ 24 ಸಾವಿರ ಕೋಟಿ ರೂ. ಆಗಿದೆ. ಕೋಲಾರ-ಚಿಕ್ಕಬಳ್ಳಾಪುರಕ್ಕೆ ಮೊದಲ ಹಂತದಲ್ಲಿ ನೀರು ತರುವುದು ಸಾಧ್ಯವಾಗಲಿಲ್ಲ. ಇದಕ್ಕೆ ಇನ್ನೂ ಜಲಾಶಯ ನಿರ್ಮಾಣ ಬಾಕಿ ಇದೆ. ಇನ್ನೂ ಭೂಸ್ವಾಧೀನ ಕೆಲಸ ಬಾಕಿ ಇದೆ. ಮುಂದುವರೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಪ್ರಾಶಸ್ತ್ಯ ರೂಪದಲ್ಲಿ ಕೈಗೊಳ್ಳಲಿ ಎಂದು ನಾನು ಡಿಕೆಶಿ ಅವರಿಗೆ ಮನವಿ ಮಾಡುತ್ತೇನೆ. ನಮ್ಮ ಜಿಲ್ಲೆಗಳಲ್ಲಿ ಎಸ್‌ಟಿಪಿ ನೀರು ಕುಡಿಯುತ್ತಿದ್ದೇವೆ. ಎಸ್‌ಟಿಪಿ ನೀರು ಕುಡಿಯುವಂತಹ ನಮ್ಮ ಅವಳಿ ಜಿಲ್ಲೆಗಳ ಜನರ ಶಾಪಕ್ಕೆ ನಾವು ಒಳಗಾಗಿದ್ದಾರೆ. ಈ ಶಾಪದಿಂದ ಈ ಸರ್ಕಾರ ನಮ್ಮನ್ನು ವಿಮುಕ್ತಿ ಮಾಡಲಿ ಎಂದು ಕೇಳಿಕೊಂಡರು. ಇದನ್ನೂ ಓದಿ: 2026-27 ರೊಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ವಿಶ್ವಾಸ: ಸಿದ್ದರಾಮಯ್ಯ

ಎತ್ತಿನಹೊಳೆ ಯೋಜನೆ ಕೈಗೆತ್ತಿಕೊಂಡಿದ್ದು ಸಿದ್ದರಾಮಯ್ಯ ನೇತೃತ್ವದ ಅಂದಿನ ಕಾಂಗ್ರೆಸ್ ಸರ್ಕಾರ. ಇದರಲ್ಲಿ ಎರಡು ಮಾತಿಲ್ಲ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಗಡಿ ಭಾಗಕ್ಕೆ ಕೃಷ್ಣ ನೀರು ಬಂದಿದೆ. ಕೃಷ್ಣ ನೀರನ್ನು ಬಳಸಿಕೊಂಡರೆ ಶಾಶ್ವತ ಪರಿಹಾರ ಸಿಗುತ್ತದೆ. ಈ ಸಂಬಂಧ ಆಂಧ್ರ ಸಿಎಂ ಜೊತೆ ಮಾತನಾಡಿ, ಕೇಂದ್ರಕ್ಕೂ ಸರ್ವಪಕ್ಷ ನಿಯೋಗ ಕೊಂಡೊಯ್ದರೆ ಇದು ಸಾಧ್ಯವಾಗುತ್ತೆ. ಚಂದ್ರಬಾಬುನಾಯ್ಡು ನಮ್ಮ ಎನ್‌ಡಿಎ ಒಕ್ಕೂಟದ ಒಂದು ಭಾಗ. 10 ಟಿಎಂಸಿ ನೀರನ್ನು ನಾರಾಯಣಪುರ ಜಲಾಶಯದ ಮೂಲಕ ಆಂಧ್ರಕ್ಕೆ ಕೊಟ್ಟು, ಕೃಷ್ಣ ನೀರನ್ನು ಈ ಭಾಗದಲ್ಲಿ ಬಳಸಿಕೊಳ್ಳಬೇಕು. ಆರು ತಿಂಗಳೊಳಗೆ ಇದು ಸಾಧ್ಯವಾಗುತ್ತದೆ. ಶಾಶ್ವತ ಪರಿಹಾರವೂ ಸಿಗುತ್ತದೆ. ಎತ್ತಿನಹೊಳೆ ಎರಡನೇ ಹಂತದ ಕಾಮಗಾರಿ ಕೈಗೆತ್ತಿಕೊಳ್ಳಿ. ಅದಕ್ಕಿಂತ ಸುಲಭವಾಗಿ ಇದನ್ನ ಮಾಡಬಹುದು. ನೆರೆಯ ಆಂಧ್ರದ ಗಡಿಗೆ ಬಂದಿರುವ ಕೃಷ್ಣ ನೀರು ಬಳಕೆಗೆ ಕ್ರಮವಹಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಎತ್ತಿನಹೊಳೆ ಯೋಜನೆಯಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ಆಗಿದೆ ಎಂಬ ಸಿ.ಟಿ.ರವಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ, ಎತ್ತಿನಹೊಳೆ ಯೋಜನೆಯಲ್ಲಿ 24 ಟಿಎಂಸಿ ನೀರು ಸಿಗುವುದಿಲ್ಲ ಎನ್ನುವ ಚರ್ಚೆ ಹತ್ತು ವರ್ಷಗಳಿಂದಲೂ ಇದೆ. ಒಟ್ಟಾರೆ ನಮ್ಮ ಭಾಗದ ಜನರಿಗೆ ನೀರು ಸಿಕ್ಕರೆ ಸಾಕು. ಸಿ.ಟಿ.ರವಿ ಅವರು ಮಾಡಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲಾ ಯೋಜನೆಗಳಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಪ್ರಶ್ನೆ ಮಾಡಿದರೆ ಅಭಿವೃದ್ಧಿಯೇ ಆಗುವುದಿಲ್ಲ. ಸಿ.ಟಿ.ರವಿ ಅವರು ಹಾಗೆ ಹೇಳಲು ಅವರ ಬಳಿ ಮಾಹಿತಿ ಏನಿದೆಯೋ ನನಗೆ ಗೊತ್ತಿಲ್ಲ. ಆದರೆ ಡಿಕೆಶಿ ಅವರು ಎತ್ತಿನಹೊಳೆ ಯೋಜನೆಯನ್ನು ತಾರ್ಕಿಕ ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅದಕ್ಕೆ ನಾನು ಅವರನ್ನು ಅಭಿನಂದಿಸುತ್ತೇನೆ. ಎಲ್ಲರೂ ಎತ್ತಿನಹೊಳೆ ಯೋಜನೆಗೆ ಶ್ರಮಿಸಿದ್ದಾರೆ. ಎಲ್ಲರಿಗೂ ಇದರ ಯಶಸ್ಸಿನ ಕೀರ್ತಿ ಸಿಗಬೇಕು. ಪ್ರಮಾಣ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು ಅಷ್ಟೇ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕೋವಿಡ್ ಮಧ್ಯಂತರ ವರದಿ ಬಗ್ಗೆ ಅಧಿಕಾರಿಗಳ ಪರಿಶೀಲನೆಗೆ ಕೊಟ್ಟಿರುವ ವಿಚಾರ ತಿಳಿಸಿದ ಅವರು, ಕೋವಿಡ್‌ನ ದೊಡ್ಡ ಆಪತ್ಕಾಲದಲ್ಲಿ ನಾವು ಪರಿಸ್ಥಿತಿ ಎದುರಿಸಿದ್ದೇವೆ. ಸರ್ಕಾರ, ನಿವೃತ್ತ ನ್ಯಾಯಾಧೀಶರಿಂದ ಮಧ್ಯಂತರ ವರದಿ ತರಿಸಿಕೊಂಡಿದೆ. ಅದಕ್ಕೆ ನನ್ನ ಸ್ವಾಗತವಿದೆ. ಈ ವರದಿಯನ್ನು ಅಧಿಕಾರಿಗಳ ಪರಿಶೀಲನೆಗೆ ಕೊಟ್ಟಿದ್ದಾರೆ. ಇದನ್ನೂ ನಾನು ಸ್ವಾಗತಿಸುತ್ತೇನೆ. ಕೋವಿಡ್‌ನ್ನು ಒಬ್ಬ ವ್ಯಕ್ತಿ ನಿರ್ವಹಿಸಿಲ್ಲ, ಇಡೀ ಸರ್ಕಾರ ಕೋವಿಡ್ ನಿರ್ವಹಣೆ ಮಾಡಿದೆ. ನಾವೆಲ್ಲರೂ ಎಲ್ಲೂ ಹೋಗುವುದಿಲ್ಲ. ನಾನು, ಬೊಮ್ಮಾಯಿ, ಯಡಿಯೂರಪ್ಪ ಮತ್ತು ಅಂದಿನ ಸಚಿವರೆಲ್ಲರೂ ಕೋವಿಡ್ ನಿರ್ವಹಿಸಿದ್ದೇವೆ. ನಾವೆಲ್ಲರೂ ಎಲ್ಲೂ ಹೋಗುವುದಿಲ್ಲ, ಇಲ್ಲೇ ಇರುತ್ತೇವೆ. ಅವರು ಸುಧಾಕರ್ ವಿರುದ್ಧ ತನಿಖೆ ಎಂದು ಹೇಳಿದ್ದಾರಾ? ಇಲ್ವಲ್ಲ. ನಾನು ಇನ್ನೂ ಮಧ್ಯಂತರ ವರದಿ ಓದಲಿಲ್ಲ. ಅಧಿಕಾರಿಗಳ ವ್ಯಾಖ್ಯಾನ ಏನು ಬರುತ್ತೆ ಎಂದು ಕಾದು ನೋಡೋಣ ಎಂದು ತಿಳಿಸಿದರು.

ಅನೇಕರು ಶಂಕೆ ಉಂಟು ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ. ಆದಷ್ಟು ಬೇಗ ಕೋವಿಡ್ ಬಗ್ಗೆ ಅಧಿಕಾರಿಗಳ ವರದಿ ಬರಲಿ. ಯಡಿಯೂರಪ್ಪನವರ ಕಾಲದಲ್ಲಿ ಯಾವ ರೀತಿಯ ಕೋವಿಡ್ ನಿರ್ವಹಣೆಯಾಗಿತ್ತು ಎಂದು ಗೊತ್ತಾಗಲಿ. ಅಧಿಕಾರಿಗಳ ವರದಿ ಬಂದ ನಂತರವೇ ನಾನು ಇದರ ಬಗ್ಗೆ ಉತ್ತರ ಕೊಡುತ್ತೇನೆ. ಈಗ ನನ್ನ ಬಳಿ ಹೇಳಲು ಏನೂ ಇಲ್ಲ. ಅನೇಕರ ಪ್ರಾಣ ರಕ್ಷಣೆಯನ್ನು ಮಾಡುವ ಸಲುವಾಗಿ ಆವತ್ತಿನ ಒತ್ತಡದ ಕಾಲದಲ್ಲಿ ಕೆಲವು ನಿರ್ಣಯ ತೆಗೆದುಕೊಂಡಿದ್ದೆವು. ಇವತ್ತು ಅದನ್ನು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ. ಮಾಡಲಿ ಸತ್ಯ ಎಲ್ಲರಿಗೂ ಗೊತ್ತಾಗುತ್ತೆ ಎಂದು ಪ್ರತಿಕ್ರಿಯಿಸಿದರು.

ಮುಡಾ/ವಾಲ್ಮೀಕಿ ಅಕ್ರಮಗಳ ಹಿನ್ನೆಲೆ ಕೋವಿಡ್ ಮೂಲಕ ಟಾರ್ಗೆಟ್ ಮಾಡಲಾಗುತ್ತಿದೆ ಎಂಬುದಕ್ಕೆ, ಇದರ ಬಗ್ಗೆ ನನಗೆ ಗೊತ್ತಿಲ್ಲ. ಇದಕ್ಕೆ ಉತ್ತರಿಸಲು ರಾಜ್ಯಾಧ್ಯಕ್ಷರಿದ್ದಾರೆ. ಪ್ರತಿಪಕ್ಷ ನಾಯಕರಿದ್ದಾರೆ. ಹೆಚ್.ಕೆ ಪಾಟೀಲ್‌ರ ಹೇಳಿಕೆಯನ್ನು ನಾನು ಗಮನಿಸಿಲ್ಲ. ಹೆಚ್.ಕೆ.ಪಾಟೀಲ್ ಹೇಳಿದಾಕ್ಷಣ ಎಲ್ಲವೂ ಮುಗಿಯುತ್ತಾ? ಅವರು ಸಚಿವ ಸಂಪುಟದ ವಕ್ತಾರರು ಅಷ್ಟೇ. ಅವರೇನು ನ್ಯಾಯಾಧೀಶರೇ? ಅವರು ವಕ್ತಾರರ ಕೆಲಸ ಮಾತ್ರ ಮಾಡಬೇಕೇ ಹೊರತು ನ್ಯಾಯಧೀಶರ ಕೆಲಸ ಯಾಕೆ ಮಾಡಬೇಕು ಎಂದು ಹೆಚ್.ಕೆ.ಪಾಟೀಲ್ ವಿರುದ್ಧ ಗರಂ ಆದರು. ಇದನ್ನೂ ಓದಿ: ಕರ್ನಾಟಕಕ್ಕೆ ಒಬ್ಬ ಯೋಗಿ ಆದಿತ್ಯನಾಥ್ ಬೇಕೇ ಹೊರತು ಜಾತಿವಾದಿ ನಾಯಕರಲ್ಲ: ಪ್ರತಾಪ್‌ ಸಿಂಹ

TAGGED:bengalurudr. k sudhakaryettinahole project
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
12 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
43 minutes ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
56 minutes ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
1 hour ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?