ಬೆಂಗಳೂರು: ಪಕ್ಷಕ್ಕೆ ನಾನು ಮುಜುಗರ ತರಿಸಲ್ಲ. ನಾನು ರಾಜೀನಾಮೆ ಕೊಡುತ್ತೇನೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಅವರು ಸಂಘದ ಪ್ರಮುಖರ ಜೊತೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಹೈಕಮಾಂಡ್ ಸೂಚನೆ ನೀಡಿರುವ ಬೆನ್ನಲ್ಲೇ ಸಂಘದ ಪ್ರಮುಖರ ಜೊತೆ ಚರ್ಚೆ ನಡೆಸಿರುವ ಸಚಿವರು, ನಾನು ರಾಜೀನಾಮೆ ಕೊಡುತ್ತೇನೆ, ಪಕ್ಷಕ್ಕೆ ಮುಜುಗರ ತರಲ್ಲ. ಪಕ್ಷದ ತೀರ್ಮಾನಕ್ಕೆ ಬದ್ಧ, ನಾನು ಸಿಎಂ ಜೊತೆಯೂ ಮಾತಾಡಿದ್ದೀನಿ. ಸಿಎಂ ಹೇಳಿದಂಗೆ ಕೇಳುತ್ತೇನೆ ಎಂದು ತಿಳಿಸಿರುವುದಾಗಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ಪ್ರತಿಕ್ರಿಯೆ ಕೊಡಲ್ಲ: ಬಿಎಸ್‍ವೈ
ಹೈಕಮಾಂಡ್ ಸೂಚನೆ ಏನು..?
ಉಡುಪಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು. ಇಂದು ಮಧ್ಯಾಹ್ನ ಮಂಗಳೂರಿನಿಂದ ಸಿಎಂ ಬಂದ ಕೂಡಲೇ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿತ್ತು. ಮೈಸೂರಿನ ಲಲಿತ ಮಹಲ್ ಅರಮನೆಯಲ್ಲಿ ವಾಸ್ತವ್ಯ ಹೂಡಿದ್ದ ಕೆ.ಎಸ್.ಈಶ್ವರಪ್ಪ ಮಧ್ಯಾಹ್ನದ ವೇಳೆಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಸಲುವಾಗಿ ಮೈಸೂರಿನಿಂದ ಹೊರಡುತ್ತಿದ್ದರು. ಈ ನಡುವೆ ರಾಜೀನಾಮೆ ಘೋಷಿಸಿದ್ದಾರೆ. ಇದನ್ನೂ ಓದಿ: ನನ್ನ ಗಂಡನ ಸಾವು ಆತ್ಮಹತ್ಯೆ ಅಲ್ಲ ಕೊಲೆ, ಈಶ್ವರಪ್ಪನಿಗೆ ತಕ್ಕ ಶಿಕ್ಷೆಯಾಗಬೇಕು: ಜಯಶ್ರೀ ಪಾಟೀಲ್
ಕಳೆದ ರಾತ್ರಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ದೆಹಲಿಯಲ್ಲಿ ಅಮಿತ್ ಶಾ ಜೊತೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಿದ್ದರು. ಪ್ರಕರಣ ರಾಜ್ಯದಲ್ಲಿ ಸರ್ಕಾರ ಮತ್ತು ಪಕ್ಷದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು. ಮಾಹಿತಿ ಪಡೆದುಕೊಂಡ ಬಳಿಕ ಹೈಕಮಾಂಡ್ ಈಶ್ವರಪ್ಪ ರಾಜೀನಾಮೆಗೆ ಸೂಚನೆ ಕೊಟ್ಟಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು. ಇದನ್ನೂ ಓದಿ: ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ
ಬೆಳಗ್ಗೆ ಹೈಕಮಾಂಡ್ ಜೊತೆ ಬಸವರಾಜ ಬೊಮ್ಮಾಯಿ ಕೂಡ ಮಾತುಕತೆ ನಡೆಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮೂಲಕ ಹೈಕಮಾಂಡ್ ಗೆ ವಿವರಣೆ ನೀಡಲಾಗಿದೆ. ಈಶ್ವರಪ್ಪ ಅವರಿಂದ ವಿವರಣೆ ಪಡೆದು ಹೈಕಮಾಂಡ್ ಗೆ ರವಾನೆ ಮಾಡಲಾಗಿತ್ತು. ಈಶ್ವರಪ್ಪ ವಿವರಣೆಗೆ ಹೈಕಮಾಂಡ್ ಗರಂ ಆಗಿ, ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು.