ಬೆಂಗಳೂರು: ಲಕ್ಷಾಂತರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಐಟಿ ಕಂಪೆನಿಗಳು ಮುಂದಾಗುತ್ತಿದ್ದಂತೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಹಿರಿಯ ಅಧಿಕಾರಿಗಳ ಸಂಬಳವನ್ನು ಕಡಿತಗೊಳಿಸಿ ಈ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.
ಹೊಸದಾಗಿ ಸೇರ್ಪಡೆಯಾಗಿರುವ ಯುವ ಉದ್ಯೋಗಿಗಳನ್ನು ಮನೆಗೆ ಕಳುಹಿಸುವುದು ಸರಿಯಾದ ನಿರ್ಧಾರ ಅಲ್ಲ. ಇದರ ಬದಲಾಗಿ ಹಿರಿಯ ಮ್ಯಾನೇಜ್‍ಮೆಂಟ್ ಹಂತದಲ್ಲಿರುವ ಉದ್ಯೋಗಿಗಳ ಸಂಬಳವನ್ನು ಕಡಿತಗೊಳಿಸುವುದು ಉತ್ತಮ ಎಂದಿದ್ದಾರೆ.
Advertisement
ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು, ನಮ್ಮ ಇನ್ಫೋಸಿಸ್ ಉದಾಹರಣೆ ತೆಗೆದುಕೊಳ್ಳಿ. 2011ರ ವೇಳೆ ಸಾಫ್ಟ್ ವೇರ್ ಉದ್ಯಮಕ್ಕೆ ಸಂಕಷ್ಟ ಎದುರಾಗಿತ್ತು. ಈ ವೇಳೆ ಹಿರಿಯ ಹಂತದ ಮ್ಯಾನೇಜ್‍ಮೆಂಟ್ ನಲ್ಲಿರುವ ವ್ಯಕ್ತಿಗಳೆಲ್ಲ ಸಭೆ ನಡೆಸಿದೆವು. ಸಭೆಯಲ್ಲಿ ಸಂಬಳವನ್ನು ಕಡಿತಗೊಳಿಸುವ ತೀರ್ಮಾನವನ್ನು ಮಾಡಿದೆವು. ಯುವ ಟೆಕ್ಕಿಗಳಿಗೆ ಜಾಬ್ ನೀಡಲು ಮತ್ತು ಅವರನ್ನು ರಕ್ಷಿಸಲು ಹಿರಿಯ ಸಿಬ್ಬಂದಿ ಈ ತ್ಯಾಗದ ನಿರ್ಧಾರವನ್ನು ಈಗ ತೆಗೆದುಕೊಳ್ಳಬೇಕು ಎಂದು ಹೇಳಿದರು.
Advertisement
ಸುಮ್ಮನೆ ಉದ್ಯೋಗಿಯನ್ನು ಮನೆಗೆ ಕಳುಹಿಸುವುದು ಸರಿಯಾದ ನಿರ್ಧಾರ ಅಲ್ಲ. ಯಾಕೆಂದರೆ ಅವರನ್ನು ನಂಬಿಕೊಂಡ ಕುಟುಂಬವು ಇದೆ ಎಂದು ಎಂದು ತಿಳಿಸಿದರು.
Advertisement
2008, 2011ರಲ್ಲಿ ಇದೇ ರೀತಿಯ ಸಮಸ್ಯೆ ಎದುರಾಗಿತ್ತು. ಹೀಗಾಗಿ ಸಮಸ್ಯೆ ನಮಗೆ ಹೊಸದೆನಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಸಮಸ್ಯೆ ಸೃಷ್ಟಿಯಾಗದೇ ಇರಲು ಪರಿಹಾರವನ್ನು ಕಂಡುಕೊಳ್ಳಬೇಕಿದೆ ಎಂದು ನಾರಾಯಣ ಮೂರ್ತಿ ಹೇಳಿದರು.
Advertisement
ಎಷ್ಟು ಜನ ಮನೆಗೆ?
ಮುಂದಿನ ಮೂರು ವರ್ಷದಲ್ಲಿ ಐಟಿ ವಲಯದಲ್ಲಿ 1.75 ಲಕ್ಷದಿಂದ 2 ಲಕ್ಷ ಎಂಜಿನಿಯರ್‍ಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಉದ್ಯೋಗ ವಲಯದ ಪ್ರಮುಖ ಸಂಸ್ಥೆಯಾದ ಹೆಡ್ ಹಂಟರ್ಸ್ ಇಂಡಿಯಾ ಹೇಳಿದೆ. ಮ್ಯಾಕ್‍ಕಿನ್ಸ್ ಆಂಡ್ ಕಂಪೆನಿ ಮುಂದಿನ ಮೂರು ವರ್ಷದಲ್ಲಿ 3-4 ವರ್ಷದಲ್ಲಿ ಐಟಿ ವಲಯದ ಅರ್ಧದಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ತಿಳಿಸಿದೆ.
ಮನೆಗೆ ಕಳುಹಿಸುತ್ತಿರುವುದು ಯಾಕೆ?
ಕೌಶಲ್ಯ ಹೊಂದಿರುವ ಎಂಜಿನಿಯರ್‍ಗಳ ಸಂಖ್ಯೆ ಕಡಿಮೆಯಾಗಿದ್ದು, ಅಟೋಮೇಶನ್ ಹೆಚ್ಚಾಗುತ್ತಿರುವುದರಿಂದ ಕಂಪೆನಿಗಳು ಈಗ ಐಟಿ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗುತ್ತಿವೆ. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ನೇಮಕವಾದ ಬಳಿಕ ವೀಸಾ ನಿಯಮವನ್ನು ಬಿಗಿಗೊಳಿಸಿದ್ದಾರೆ. ಅಷ್ಟೇ ಅಲ್ಲದೇ ಅಮೆರಿಕದ ಜನರಿಗೆ ಕಂಪೆನಿಗಳು ಉದ್ಯೋಗ ನೀಡಬೇಕು ಎಂದು ಹೇಳಿರುವುದರಿಂದ ಭಾರತೀಯ ಐಟಿ ಕಂಪೆನಿಗಳ ಮಾರುಕಟ್ಟೆಯ ಮೇಲೆ ಭಾರೀ ಹೊಡೆತ ಬಿದ್ದಿದೆ.
ಇದನ್ನೂ ಓದಿ:ಇನ್ಫಿ ಸಿಒಒಗೆ ಭಾರೀ ಪ್ರಮಾಣದ ಸಂಬಳ ಏರಿಸಿದ್ದಕ್ಕೆ ನಾರಾಯಣ ಮೂರ್ತಿ ಆಕ್ಷೇಪ
In conv w/ ET NOW's @chandrarsrikant, @Infosys_nmurthy backs IT employee concerns on layoffs, says it's unfair to send employees home. pic.twitter.com/EEMOJqy7qM
— ET NOW (@ETNOWlive) June 1, 2017
ಇದನ್ನೂ ಓದಿ: ಸ್ಟಾರ್ಟ್‌ಅಪ್ ಕಂಪೆನಿಗಳಲ್ಲಿ ಟೆಕ್ಕಿಗಳಿಗೆ ವಿಶ್ವದಲ್ಲೇ ಬೆಂಗಳೂರಿನಲ್ಲಿ ಕಡಿಮೆ ಸಂಬಳ: ಯಾವ ನಗರದಲ್ಲಿ ಎಷ್ಟು ಸಂಬಳ?