ವಾಷಿಂಗ್ಟನ್: ಗಾಜಾ ಪಟ್ಟಿಯನ್ನು (Gaza Strip) ಆಕ್ರಮಿಸುವ ಇಸ್ರೇಲ್ (Israel) ನಡೆಗೆ ಅಮೆರಿಕ ವಿರೋಧ ವ್ಯಕ್ತಪಡಿಸಿದೆ. ಇದು ಇಸ್ರೇಲಿ ಜನರಿಗೆ ಒಳ್ಳೆಯದಲ್ಲ ಎಂದು ಅಮೆರಿಕ (America) ಎಚ್ಚರಿಕೆ ನೀಡಿದೆ.
ಇಸ್ರೇಲಿ ಯೋಧರು ಗಾಜಾ ನಗರದ ಹೃದಯ ಭಾಗದಲ್ಲಿದ್ದಾರೆ ಎಂದು ಈಚೆಗೆ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ ಸಂದೇಶ ರವಾನಿಸಿದೆ. ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ, ಇಸ್ರೇಲಿ ಪಡೆಗಳಿಂದ ಗಾಜಾವನ್ನು ಮರು ಆಕ್ರಮಣ ಮಾಡುವುದು ಒಳ್ಳೆಯದಲ್ಲ ಎಂದು ಅಧ್ಯಕ್ಷರು (ಜೋ ಬೈಡೆನ್) ಭಾವಿಸಿದ್ದಾರೆ. ಇದು ಇಸ್ರೇಲ್ ಹಾಗೂ ದೇಶದ ಜನತೆಗೆ ಒಳ್ಳೆಯದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪೋರ್ಚುಗಲ್ ಪ್ರಧಾನಿ ಸ್ಥಾನಕ್ಕೆ ಆಂಟೋನಿಯೊ ಕೋಸ್ಟಾ ರಾಜೀನಾಮೆ
ಭವಿಷ್ಯದ ದಾಳಿಗಳನ್ನು ತಡೆಗಟ್ಟಲು ಹೋರಾಟ ಮುಗಿದ ನಂತರ ಇಸ್ರೇಲ್, ಗಾಜಾ ಪಟ್ಟಿಯ ಭದ್ರತೆಯನ್ನು ಮೇಲ್ವಿಚಾರಣೆ ಮಾಡಬೇಕಾಗುತ್ತದೆ ಎಂದು ನೆತನ್ಯಾಹು ಹೇಳಿಕೆ ನೀಡಿದ್ದಾರೆ. ಇದಕ್ಕೆ ಅಮೆರಿಕ ಆಕ್ಷೇಪ ವ್ಯಕ್ತಪಡಿಸಿದ್ದು, ಎಚ್ಚರಿಕೆಯ ಮಾತನ್ನಾಡಿದೆ.
ಗಾಜಾವನ್ನು ಇಸ್ರೇಲ್ ಆಕ್ರಮಿಸಿಕೊಳ್ಳುವುದು ದೊಡ್ಡ ತಪ್ಪು ಎಂದು ಕೆಲ ದಿನಗಳ ಹಿಂದೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅಭಿಪ್ರಾಯಪಟ್ಟಿದ್ದರು. ಇದೇ ಸಂದರ್ಭದಲ್ಲಿ ಯುನೈಟೆಡ್ ಸ್ಟೇಟ್ಸ್‌ನಲ್ಲಿನ ಇಸ್ರೇಲಿ ರಾಯಭಾರಿ ಮೈಕೆಲ್ ಹೆರ್ಜೋಗ್, ಇಸ್ರೇಲ್ ಸಂಘರ್ಷ ಕೊನೆಗೊಂಡ ನಂತರ ಗಾಜಾವನ್ನು ವಶಪಡಿಸಿಕೊಳ್ಳಲು ಉದ್ದೇಶಿಸುವುದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಜನಸಂಖ್ಯೆ ನಿಯಂತ್ರಣ ಕುರಿತು ವಿಲಕ್ಷಣ ಹೇಳಿಕೆ – ನಿತೀಶ್ ಕುಮಾರ್ ಅಸಭ್ಯ ನಾಯಕ ಎಂದ BJP
US ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಕಳೆದ ವಾರ, ಪ್ಯಾಲೆಸ್ತೀನಿಯರು ಗಾಜಾವನ್ನು ಮತ್ತೆ ಪ್ರವೇಶಿಸಲು ಅನುವು ಮಾಡಿಕೊಡಬೇಕು. ಅವರಿಗೆ ಮಾನವೀಯ ನೆರವು ನೀಡಬೇಕು ಎಂದು ಒತ್ತಾಯಿಸಿದ್ದರು. ಆದರೆ ಈ ಹೇಳಿಕೆಯನ್ನು ನೆತನ್ಯಾಹು ಖಂಡಿಸಿದ್ದಾರೆ. ಯುದ್ಧವು ಮುಂದುವರಿದಂತೆ ಯುಎಸ್ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ವ್ಯಕ್ತವಾಗುತ್ತಿದೆ.