ಬೆಂಗಳೂರು: ಪತಿಯಿಂದ ದೈಹಿಕ ಸಂಪರ್ಕ ನಿರಾಕರಿಸುವುದು ಹಿಂದೂ ವಿವಾಹ ಕಾಯ್ದೆ 1955ರ (Hindu Marriage Act 1955) ಅಡಿಯಲ್ಲಿ ಕ್ರೌರ್ಯವಾಗಿದೆ. ಆದ್ರೆ ಐಪಿಸಿ ಸೆಕ್ಷನ್ 498A (IPC Section) ಅಡಿಯಲ್ಲಿ ಇದು ಕ್ರೌರ್ಯವಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka Highcourt) ಮಹತ್ವದ ತೀರ್ಪು ಪ್ರಕಟಿಸಿದೆ. ಈ ಮೂಲಕ ಪತಿ ಹಾಗೂ ಪೋಷಕರ ವಿರುದ್ಧ ಪತ್ನಿ ದಾಖಲಿಸಿದ ಕ್ರಿಮಿನಲ್ ಮೊಕದ್ದಮೆಯನ್ನ ವಜಾಗೊಳಿಸಿದೆ.
ಐಪಿಸಿ ಸೆಕ್ಷನ್ 498ಎ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ-1961ರ (Dowry Prohibition Act) ಸೆಕ್ಷನ್ 4ರ ಅಡಿಯಲ್ಲಿ ಪತಿ ಹಾಗೂ ಪೋಷಕರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಆರೋಪಪಟ್ಟಿಯನ್ನು ಪ್ರಶ್ನಿಸಿ ಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪತ್ನಿ ಸಲ್ಲಿಸಿದ ದೂರನ್ನೇ ವಜಾಗೊಳಿಸಿದೆ.
ಪತಿ ಆಧ್ಯಾತ್ಮಿಕ ಸಾಧನೆಯತ್ತ ಮುಖ ಮಾಡಿದ್ದರು, ದೈಹಿಕ ಪ್ರೀತಿಗಿಂತ ಆತ್ಮಗಳ ಪ್ರೀತಿ ಮುಖ್ಯ ಎಂದು ನಂಬಿದ್ದರು. ಪತಿ ತನ್ನ ಹೆಂಡತಿಯೊಂದಿಗೆ ದೈಹಿಕ ಸಂಬಂಧ ಹೊಂದಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಛತ್ತೀಸ್‌ಗಢದ ಮಾವಿನ ಮೇಳದಲ್ಲಿ ವಿಶ್ವದ ದುಬಾರಿ ಮಾವಿನ ಪ್ರದರ್ಶನ- ಕೆ.ಜಿಗೆ 2.70 ಲಕ್ಷ ರೂ.
ಮಹಿಳೆಯೊಬ್ಬರು (Women) 2019ರ ಡಿ.18 ರಂದು ವ್ಯಕ್ತಿಯೊಬ್ಬರನ್ನ ವಿವಾಹವಾಗಿದ್ದರು. ವಿವಾಹವಾಗಿ 28 ದಿನ ಜೊತೆಯಲ್ಲಿದ್ದರು. ಇದಾದ ನಂತರ ಪತಿ ಆಧ್ಯಾತ್ಮಿಕ ಸಾಧನೆಯ ಕಡೆ ಮುಖ ಮಾಡಿದ್ದಾರೆ. ಅಲ್ಲದೇ ದೈಹಿಕ ಪ್ರೀತಿಗಿಂತ, ಆತ್ಮಗಳ ಪ್ರೀತಿ ಮುಖ್ಯವೆನ್ನುತ್ತಿದ್ದ ಪತಿ, ಅಧ್ಯಾತ್ಮಿಕ ಸಾಧಕಿಯೊಬ್ಬರ ಉಪನ್ಯಾಸ ವೀಕ್ಷಿಸುವಂತೆ ತನ್ನ ಪತ್ನಿಗೆ ಹೇಳುತ್ತಿದ್ದರು. ಪತಿಯ ನಡೆಯಿಂದ ಮನನೊಂದ ಪತ್ನಿ ದೈಹಿಕ ಸಂಬಂಧದಿಂದ ನಿರಾಸೆ ಹೊಂದಿ ಪತಿ ವಿರುದ್ಧ ದೂರು ದಾಖಲಿಸಿದ್ದಾರೆ.
2020ರ ಫೆಬ್ರವರಿ 5ರಂದು ಸೆಕ್ಷನ್ 498A ಮತ್ತು ವರದಕ್ಷಿಣೆ ಕಾಯ್ದೆಯ ಅಡಿಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಿಂದೂ ವಿವಾಹ ಕಾಯ್ದೆ ಸೆಕ್ಷನ್-12(1)(A) ಅಡಿಯಲ್ಲಿ ಆಕೆ ಕೌಟುಂಬಿಕ ನ್ಯಾಯಾಲಯದಲ್ಲೂ ದಾವೆ ಹೂಡಿದ್ದರು. ಈ ಮದುವೆಯನ್ನು ರದ್ದುಗೊಳಿಸುವಂತೆ ಕೋರಿದ್ದರು. 2022ರ ನವೆಂಬರ್ 16 ರಂದು ಮದುವೆ ರದ್ದಾದ ನಂತರ ಪತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ನಿರ್ಧರಿಸಿದರು. ಇದನ್ನೂ ಓದಿ: Odisha Train Tragedy – ವಿಚಾರಣೆ ಎದುರಿಸಿದ್ದ ಜ್ಯೂನಿಯರ್ ಎಂಜಿನಿಯರ್ ನಾಪತ್ತೆ
ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಈ ಕೇಸ್‌ನಲ್ಲಿ ಕ್ರಿಮಿನಲ್ ಪ್ರಕ್ರಿಯೆಗಳನ್ನು ಮುಂದುವರಿಸಲು ಅನುಮತಿಸಲಾಗುವುದಿಲ್ಲ. ಹಾಗೆ ಮಾಡಿದರೆ ಅದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿತ್ತದೆ ಎಂದು ಅಭಿಪ್ರಾಯಪಟ್ಟು ಪತಿ ವಿರುದ್ಧದ ಕಾನೂನು ಪ್ರಕ್ರಿಯೆಯನ್ನೇ ರದ್ದುಗೊಳಿಸಿದೆ.