ಹುಬ್ಬಳ್ಳಿ: ಜಿ20 (G20) ಸಭೆಗೆ ನನ್ನನ್ನು ಕರೆದಿಲ್ಲ. ಔತಣಕೂಟಕ್ಕೆ ಕರೆದಿದ್ದಾರೆ. ನನಗೆ ಬೇರೆ ಕೆಲಸ ಇರುವುದರಿಂದ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗುವುದಿಲ್ಲ. ಮೋದಿಯವರು (Narendra Modi) ಗುಜರಾತ್ ಮುಖ್ಯಮಂತ್ರಿಯಾದ ಬಳಿಕ ನೇರವಾಗಿ ಪ್ರಧಾನಿಯಾದರು. ಪ್ರಜಾಪ್ರಭುತ್ವದಲ್ಲಿ ಏನು ಬೇಕಾದರೂ ಆಗಬಹುದು. ಸುಮ್ಮನೆ ಅವರನ್ನು ಟೀಕೆ ಮಾಡುವುದಿಲ್ಲ. ಇರುವ ಸಮಸ್ಯೆಗಳ ಬಗ್ಗೆ ಮಾತ್ರ ನಾನು ಮಾತನಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: G20 ಒಕ್ಕೂಟಕ್ಕೆ ಆಫ್ರಿಕನ್ ಯೂನಿಯನ್ ಸೇರ್ಪಡೆ
Advertisement
ಜೆಡಿಎಸ್ (JDS), ಬಿಜೆಪಿಯ (BJP) ಬಿ ಟೀಮ್ ಎಂಬುದು ಈಗ ಸಾಬೀತಾಗಿದೆ. ಮೊದಲು ಬಿ ಟೀಮ್ ಎಂದರೆ ಕೋಪ ಮಾಡಿಕೊಳ್ಳುತ್ತಿದ್ದರು. ಜಾತ್ಯತೀತ ಎಂದು ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಸೇರಿದ್ದಾರೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ವ್ಯಂಗ್ಯವಾಡಿದ್ದಾರೆ.
Advertisement
Advertisement
ದೇವೇಗೌಡರು ಯಾವ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ ಎಂದಿದ್ದರು. ಆದರೆ ಜಿ.ಟಿ ದೇವೇಗೌಡ ಪಕ್ಷದ ಉಳಿವಿಗೆ ಸೇರಿದ್ದೇವೆ ಎನ್ನುತ್ತಾರೆ. ಇವರಿಗೆ ಯಾವ ಸಿದ್ಧಾಂತವೂ ಇಲ್ಲ. ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.
Advertisement
ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್‍ನ ಅಧ್ಯಕ್ಷರು ಮಾತ್ರವಲ್ಲ. ಅವರು ವಿರೋಧ ಪಕ್ಷದ ನಾಯಕರು ಹೌದು. ಅವರನ್ನು ಜಿ20 ಸಭೆಗೆ ಆಹ್ವಾನಿಸದಿರುವುದು ಸರಿಯಾದ ಕ್ರಮ ಅಲ್ಲ ಎಂದಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಮೈತ್ರಿಯನ್ನು ನಾನು ಸ್ವಾಗತ ಮಾಡ್ತೀನಿ: ಮುನಿರತ್ನ
Web Stories