ಬೆಂಗಳೂರು: ಒಂದು ವರ್ಷ ಏಕೆ, 5 ವರ್ಷವೂ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಿರಲಿ ಎಂದು ಕುಮಾರಸ್ವಾಮಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಒಂದು ವರ್ಷ ಮೈತ್ರಿ ಸರ್ಕಾರವನ್ನು ಯಾರು ಅಲುಗಾಡಿಸಲು ಆಗಲ್ಲ ಎಂದು ಈ ಹಿಂದೆ ಕುಮಾರಸ್ವಾಮಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ಮೈತ್ರಿ ಸರ್ಕಾರ ಅವರದ್ದೇ ಇದೆಯಲ್ವಾ. ಒಂದು ವರ್ಷ ಏಕೆ, 5 ವರ್ಷವೂ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ. ವಿರೋಧ ಪಕ್ಷದಲ್ಲಿದ್ದು ನಮ್ಮ ಕೆಲಸವನ್ನು ನಾವು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಟಾಂಗ್ ನೀಡಿದರು. ಇದನ್ನು ಓದಿ: ಇನ್ನು ಒಂದು ವರ್ಷ ಯಾರೂ ನನ್ನ ಟಚ್ ಮಾಡೋಕೆ ಆಗಲ್ಲ: ಸಿಎಂ ಎಚ್ಡಿಕೆ
Advertisement
Advertisement
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದಲ್ಲಿ ಯಾವುದೇ ಸಂಘಟನೆ ಭಾಗಿಯಾಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಇದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ ಎಂದು ಹೇಳಿದರು.