50 ಅಲ್ಲ 100 ಕೋಟಿ ಕೊಟ್ರೂ ಕಾಂಗ್ರೆಸ್ ಶಾಸಕರು ಬಿಜೆಪಿ ಗಾಳಕ್ಕೆ ಬೀಳಲ್ಲ: ಗಣಿಗ ರವಿ

Public TV
2 Min Read
Ganiga Ravikumar 1

ಮಂಡ್ಯ: ಸರ್ಕಾರ ಕೆಡವಲು ನಮ್ಮ ಶಾಸಕರ ಬಳಿ ಮಾತನಾಡಿ 50 ಕೋಟಿ ಆಫರ್ (Offer) ನೀಡಿ ಬಿಜೆಪಿಗೆ (BJP) ಬಂದರೆ ಮಂತ್ರಿಗಿರಿ ಕೊಡ್ತೀವಿ ಎಂದು ಹೇಳಿದ್ದಾರೆ. ಹಳೆ ಮೈಸೂರು ಭಾಗದ ಒಬ್ಬ ಎಂಎಲ್‌ಸಿ, ಬೆಳಗಾವಿಯ ಮಾಜಿ ಸಚಿವ ಸಂತೋಷ್, ಗೋಲ್ಡ್ ಫಿಂಚ್‌ನಲ್ಲಿ ನಮ್ಮ ಶಾಸಕರನ್ನು ಮೀಟ್ ಮಾಡಿದ್ದಾರೆ. ಎರಡು ದಿನದ ಬಳಿಕ ನಾನು ಸಿಎಂ, ಡಿಸಿಎಂ ಜೊತೆ ಮಾತನಾಡಿ ಮಾಧ್ಯಮದ ಮುಂದೆ ಬರುತ್ತೇನೆ ಎಂದು ಮಂಡ್ಯದಲ್ಲಿ (Mandya) ಶಾಸಕ ಗಣಿಗ ರವಿ (Ganiga Ravikumar) ಹೇಳಿದ್ದಾರೆ.

ಶುಕ್ರವಾರ ಹೇಳಿದ್ದನ್ನು ಮತ್ತೆ ರಿಪೀಟ್ ಮಾಡಲು ನಂಗೆ ಇಷ್ಟ ಇಲ್ಲ. ಶಾಸಕರನ್ನು ಸೆಳೆಯಲು ಪ್ರಯತ್ನ ಪಡುತ್ತಿರೋದಕ್ಕೆ ಸಾಕ್ಷಿ ಇದೆ. ಮೂರು ಅಲ್ಲ ಇನ್ನೂ ದೊಡ್ಡ ದೊಡ್ಡ ನಾಯಕರು ಇದ್ದಾರೆ ಅಂತಾ ನಮ್ಮ ಡಿಸಿಎಂ ಹೇಳಿದ್ದಾರೆ. ನನ್ನ ಬಳಿ ಇರೋ ಮಾಹಿತಿಯನ್ನು ಸಿಎಂ, ಡಿಸಿಎಂಗೆ ಹೇಳುತ್ತೇನೆ. ಅವರ ಬಳಿ ಇರುವ ಮಾಹಿತಿ ತೆಗೆದುಕೊಂಡು ಮಾಧ್ಯಮದ ಮುಂದೆ ಬರುತ್ತೇನೆ. ಒಂದು ವೇಳೆ ನನಗೆ ಆಫರ್ ನೀಡಲು ಬಂದಿದ್ದರೆ ಲೈವ್ ಮಾಡಿ ತೋರಿಸುತ್ತಾ ಇದ್ದೆ. ಸಂತೋಷ್ ಪಕ್ಷಕ್ಕೆ ಕರೆದಿರೋದು ಬೇರೆ ವಿಚಾರ ಅಂತಾ ಈಗಾಗಲೇ ಹೇಳಿದ್ದಾರೆ. ಪಕ್ಷಕ್ಕೆ ಕರೆದಿರೋದು ನಿಜ ಎಂದು ಅವರೇ ಒಪ್ಪಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ದರೋಡೆ, ಅತ್ಯಾಚಾರ, ಜೈಲಿಗೆ ಹೋಗೋದ್ರಲ್ಲಿ ಮುಸ್ಲಿಮರೇ ನಂ.1- ವಿವಾದಕ್ಕೀಡಾದ ಅಜ್ಮಲ್ ಹೇಳಿಕೆ

ಎರಡು ದಿನದ ಬಳಿಕ ನಾನು ಸಿಎಂ, ಡಿಸಿಎಂ ಜೊತೆ ಮಾತನಾಡಿ ಮಾಧ್ಯಮದ ಮುಂದೆ ಬರುತ್ತೇನೆ. ಎಲ್ಲಿ ಏನು ಮಾತನಾಡಿದ್ದಾರೆ ಎಂಬ ಸಾಕ್ಷಿಯನ್ನು ಅತೀ ಶ್ರೀಘ್ರದಲ್ಲಿ ಬಿಡುತ್ತೇವೆ. ಕರ್ನಾಟಕದ ಎಲ್ಲಾ ಕಡೆ ಬಲೆ ಹಾಕಲು ಹೊರಟಿದ್ದಾರೆ. ಸದ್ಯಕ್ಕೆ ಐದು ಜನಕ್ಕೆ ಆಫರ್ ಬಂದಿದೆ. ಒಬ್ಬರ ಮುಂದೆ ಕೂತು ಇನ್ನೊಬ್ಬರಿಗೆ ಸ್ಪೀಕರ್ ಹಾಕಿ ಮಾತನಾಡಿದ್ದಾರೆ. ಯಾರಿಗೆ ಆಫರ್ ಕೊಟ್ಟಿದ್ದಾರೋ ಆ ಶಾಸಕರ ಜೊತೆ ಮಾಧ್ಯಮದ ಮುಂದೆ ಬರುತ್ತೇವೆ. ಬಿಜೆಪಿ ಗಾಳಕ್ಕೆ 50 ಅಲ್ಲ 100 ಕೋಟಿ ಕೊಟ್ಟರೂ ಕಾಂಗ್ರೆಸ್ (Congress) ಶಾಸಕರು ಬೀಳಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಚಂದ್ರಗ್ರಹಣ ಎಫೆಕ್ಟ್ – ಮಂಗಳೂರಿನ ಕದ್ರಿ ದೇಗುಲದಲ್ಲಿ ಭಕ್ತಸಾಗರ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article