ಭೋಪಾಲ್: ಏಳು ತಿಂಗಳಿನಿಂದ ಸರಿಯಾಗಿ ಸಂಬಳ ನೀಡಿಲ್ಲ ಎಂದು ಖಾಸಗಿ ಕಂಪನಿಯ ಏಳು ಉದ್ಯೋಗಿಗಳು ಇಂದೋರ್‌ನ ಕಾರ್ಖಾನೆಯೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇದೀಗ ಅವರನ್ನು ಸರ್ಕಾರಿ ಎಂವೈ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಕಳೆದ ಏಳು ತಿಂಗಳಿನಿಂದ ಕಾರ್ಮಿಕರಿಗೆ ನಿಯಮಿತವಾಗಿ ವೇತನ ನೀಡಿಲ್ಲ. ಅಲ್ಲದೇ ಅವರನ್ನು ಬೇರೆ ಶಾಖೆಗೆ ವರ್ಗಾಯಿಸಲಾಗುತ್ತಿದೆ. ಅದಕ್ಕಾಗಿಯೇ ನಮ್ಮ ಸ್ನೇಹಿತರು ವಿಷ ಸೇವಿಸಿದ್ದಾರೆ ಎಂದು ಸಹೋದ್ಯೋಗಿ ಅನಿಲ್ ನಿಗಮ್ ಎಂಬವರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಮಗಾರಿ ಉದ್ಘಾಟನೆ ವೇಳೆ ಎಡವಟ್ಟು – ಜನರ ನೂಕುನುಗ್ಗಲಿನಿಂದ ಹೈರಾಣಾದ ಶ್ರೀರಾಮುಲು
ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿ ಅಜಯ್ ಸಿಂಗ್ ಕುಶ್ವಾಹ ಮಾತನಾಡಿ, ಕಾರ್ಖಾನೆಯ ಕಾರ್ಮಿಕರಿಗೆ ಕಳೆದ ಏಳು ತಿಂಗಳಿಂದ ಸಂಬಳ ನೀಡಿಲ್ಲ. ಅವರು ಮಾಡ್ಯುಲರ್ ಕಿಚನ್‍ಗಳಿಗೆ ಕಚ್ಚಾ ವಸ್ತುಗಳನ್ನು ಉತ್ಪಾದಿಸುವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಬಂಗಾಂಗದ ಇನ್ನೊಂದು ಕಾರ್ಖಾನೆಯಲ್ಲಿ ಕೆಲಸಕ್ಕೆ ಸ್ಥಳಾಂತರಿಸಲಾಯಿತು. ಸದ್ಯ ನಾವು ಈ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗೋ ಮೂತ್ರದಲ್ಲಿ ಸ್ನಾನ ಮಾಡೋದು ನೀವೇ ಅಲ್ವಾ- ಅಮೆರಿಕದಲ್ಲಿ ಭಾರತೀಯರ ಮೇಲೆ ಜನಾಂಗೀಯ ನಿಂದನೆ