ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿದ್ದಾರೆ ಎಂಬುದು ಸುಳ್ಳು. ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
Advertisement
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿದ್ದಾರೆ ಎಂಬ ಆರೋಪದ ಬಗ್ಗೆ ಸಿಎಂ ಹಾಗೂ ಶಿಕ್ಷಣ ಸಚಿವರ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಬಾರದು. ಯಾವುದೇ ಪಠ್ಯವನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿದ ಪಾದಚಾರಿಗಳು – ಓರ್ವ ಸಾವು, ನಿರ್ದೇಶಕ ವಶಕ್ಕೆ
Advertisement
Advertisement
ಪ್ರಿಯಾಂಕ್ ಖರ್ಗೆ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ಆರೋಪವನ್ನು ತಳ್ಳಿ ಹಾಕಿದ ಸಚಿವರು, ಎಸ್‍ಸಿ, ಎಸ್‍ಟಿಗಳಿಗೆ ನೀಡುವ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮವಾಗಿಲ್ಲ. ಎರಡು ಗುಂಪುಗಳ ನಡುವೆ ಟೆಂಡರ್ ಸಿಕ್ಕಿರೋದೆ ಸಂಘರ್ಷಕ್ಕೆ ಕಾರಣವಾಗಿದೆ. ಕೋರ್ಟ್‍ನಲ್ಲಿ ದಾವೆ ಹೂಡಿದ್ರೂ, ಅವರ ವಿರುದ್ಧ ಅಭಿಪ್ರಾಯ ವ್ಯಕ್ತವಾಗಿದೆ. ಮೂರು ಸಾವಿರ ಕೊಳವೆ ಬಾವಿ ಕೊರೆದಿದ್ದಾರೆ. ಅನೇಕ ಕೊಳವೆಬಾವಿ ಆಗಿಲ್ಲ. ಖರ್ಗೆ ಅವರು ಸದನದಲ್ಲಿ ಕೇಳಿದಾಗ ಉತ್ತರ ನೀಡದ್ದೇನೆ. ಟೆಂಡರ್‌ನಲ್ಲಿ ಯಾವುದೇ ಗೋಲ್ಮಾಲ್ ಆಗಿಲ್ಲ. ಈಗಾಗಲೇ ತನಿಖಾಧಿಕಾರಿಯನ್ನು ನೇಮಕ ಮಾಡಿದ್ದೇವೆ. ವರದಿ ಬಂದ ಬಳಿಕ ನನ್ನನ್ನೂ ಸೇರಿದಂತೆ ಎಲ್ಲರನ್ನೂ ತನಿಖೆಗೆ ಒಳಪಡಿಸುತ್ತೇನೆ. ಸುಖಾ ಸುಮ್ಮನೆ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ
Advertisement