ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಇತ್ತೀಚಿನ ದಿನಗಳಲ್ಲಿ ಸಿನಿಮಾಗಿಂತ ರಾಜಕೀಯ ವಿಚಾರವಾಗಿ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವನ್ನು ಆಗಾಗ ನಟ ಟೀಕಿಸುತ್ತಲೇ ಬಂದಿದ್ದಾರೆ. ಇದೀಗ ಅವರು ಬಿಜೆಪಿಗೆ (BJP) ಸೇರ್ಪಡೆ ಆಗುತ್ತಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೆ ಪ್ರಕಾಶ್ ರಾಜ್ ಮೌನ ಮುರಿದಿದ್ದಾರೆ. ಇದನ್ನೂ ಓದಿ:ಸೋನು ಶ್ರೀನಿವಾಸ್ ಗೌಡಗೆ ಜಾಮೀನು
Advertisement
ಪ್ರಕಾಶ್ ರಾಜ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಪ್ರಯತ್ನಿಸಿದ್ದಾರೆ ಅಂತ ನಾನು ಭಾವಿಸಿದ್ದೇನೆ. ನನ್ನನ್ನು ಕೊಂಡುಕೊಳ್ಳುವಷ್ಟು ಅವರು ಸೈದ್ಧಾಂತಿಕವಾಗಿ ಶ್ರೀಮಂತವಾಗಿಲ್ಲ ಎಂಬುದು ಅವರಿಗೆ ಅರ್ಥ ಆಗಿರಬೇಕು. ನಿಮ್ಮ ಅಭಿಪ್ರಾಯವೇನು ಸ್ನೇಹಿತರೇ. ಜಸ್ಟ್ ಆಸ್ಕಿಂಗ್ ಎಂದು ಪ್ರಕಾಶ್ ರಾಜ್ ರಿಯಾಕ್ಟ್ ಮಾಡಿದ್ದಾರೆ.
Advertisement
I guess they tried 😂😂😂 must have realised they were not rich enough (ideologically) to buy me.. 😝😝😝.. what do you think friends #justasking pic.twitter.com/CCwz5J6pOU
— Prakash Raj (@prakashraaj) April 4, 2024
Advertisement
ಈ ಮೂಲಕ ಬಿಜೆಪಿ ಮೂಲಕ ರಾಜಕೀಯ ಎಂಟ್ರಿ ಕುರಿತು ಹಬ್ಬಿರುವ ಸುದ್ದಿಗೆ ಪ್ರಕಾಶ್ ರಾಜ್ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಪಕ್ಷಕ್ಕೆ ಸೇರುವ ಸುದ್ದಿ ಸುಳ್ಳು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
Advertisement
ಜ್ಯೂ.ಎನ್‌ಟಿಆರ್ ನಟನೆಯ ದೇವರ ಪಾರ್ಟ್ 1, ಪುಷ್ಪ 2 (Pushpa 2), ಪವನ್ ಕಲ್ಯಾಣ್ ನಟನೆಯ OG ಸಿನಿಮಾಗಳಲ್ಲಿ ಪ್ರಕಾಶ್ ರಾಜ್ ಪ್ರಸ್ತುತ ನಟಿಸುತ್ತಿದ್ದಾರೆ.