ನ್ಯಾಯಾಧೀಶರ ಕುರಿತು ಟ್ವೀಟ್ ಮಾಡಿದ ಪ್ರಕರಣಕ್ಕೆ ಜೈಲುವಾಸ ಅನುಭವಿಸಿ ಸೋಮವಾರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್, ತಮ್ಮ ನಿಲುವಿನ ಕುರಿತು ಮತ್ತೆ ಸ್ಪಷ್ಟಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ತಪ್ಪು ಕಂಡಲ್ಲಿ ಮಾತನಾಡುತ್ತೇನೆ. ಮತ್ತಷ್ಟು ಜನರಿಗೆ ತಲುಪಲು ಆ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವೆ. ಯಾವುದೇ ಕಾರಣಕ್ಕೂ ಟ್ವಿಟ್ ಮಾಡುವುದನ್ನು ನಿಲ್ಲಿಸುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ : ಚೇತನ್ ಅಹಿಂಸಾ ಬಿಡುಗಡೆ – ಖುಷ್ ಆದ ಅಭಿಮಾನಿಗಳು
Advertisement
ಸೋಮವಾರ ಸಂಜೆ ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ನಟ ಚೇತನ್ ಅವರನ್ನು ಅಭಿಮಾನಿಗಳು ಮತ್ತು ಅವರ ತತ್ವವನ್ನು ಮೆಚ್ಚಿಕೊಂಡವರು ಜೈಲು ಮುಂದೆಯೇ ಸ್ವಾಗತಿಸಿದರು. ನೆಚ್ಚಿನ ನಟನ ಪರ ಘೋಷಣೆ ಕೂಗಿದರು. ಪತ್ನಿ ಮೇಘಾ ಕೂಡ ಪತಿಯ ಬಿಡುಗಡೆಗೆ ಹರ್ಷ ವ್ಯಕ್ತ ಪಡಿಸಿದರು. ಇದನ್ನೂ ಓದಿ : ಶಿವರಾತ್ರಿ ವಿಶೇಷ: ತೆರೆಗೆ ಶಿವನಾಗಿ ದರ್ಶನ ಕೊಟ್ಟ ನಟ ಶಿವರು
Advertisement
Advertisement
ಚೇತನ್ ಬಿಡುಗಡೆಗಾಗಿ ವಕೀಲರಾದ ಬಾಲನ್, ಹರಿರಾಮ್ ಎ, ಕಾಶಿನಾಥ್ ಜೆ.ಡಿ, ರಮೇಶ್, ಪ್ರಸನ್ನ, ಸುನೀಲ್ ಕುಮಾರ್ ಗುನ್ನಾಪುರ ಮತ್ತು ಅವರ ತಂಡ ಸತತವಾಗಿ ಪ್ರಯತ್ನಿಸಿತ್ತು. ಹಾಗಾಗಿ ಚೇತನ್ ಬಿಡುಗಡೆ ಸಂದರ್ಭದಲ್ಲಿ ವಕೀಲರ ತಂಡವೂ ಅಲ್ಲಿತ್ತು.