ಒಟ್ಟಾವಾ: ಭಾರತದ ಮೇಲೆ ಕೆನಡಾ ಮಾಡಿದ ಆರೋಪ ಜಗತ್ತಿನಾದ್ಯಂತ ಸುದ್ದಿಯಾದ ಬೆನ್ನಲ್ಲೇ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ಸಿಟ್ಟು ತಣ್ಣಗಾದಂತೆ ಕಾಣಿಸುತ್ತಿದೆ.
ಹೌದು. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ (Hardeep Singh Nijjar) ಹತ್ಯೆಯ ಹಿಂದೆ ಭಾರತದ (India) ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದ ಪ್ರಧಾನಿ ಇದೀಗ ಸ್ಪಷ್ಟನೆ ನೀಡಿದ್ದಾರೆ. ನಾವು ಭಾರತವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿಲ್ಲ, ಆದರೆ ಕೆನಡಾವು ಈ ಸಮಸ್ಯೆಯನ್ನು ಪರಿಹರಿಸಬೇಕೆಂದು ಬಯಸುತ್ತದೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
Advertisement
ಈ ವಿಚಾರವನ್ನು ಭಾರತ ಸರ್ಕಾರವು ಬಹಳ ಗಂಭೀರವಾಗಿ ಪರಿಗಣಿಸಬೇಕಾಗಿದೆ. ನಾವು ಹಾಗೆ ಮಾಡುತ್ತಿದ್ದೇವೆ, ನಾವು ಭಾರತವನ್ನು ಪ್ರಚೋದಿಸುವ ಅಥವಾ ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ಯೋಚಿಸುತ್ತಿಲ್ಲ ಎಂದು ಹೇಳುವ ಮೂಲಕ ಕೆನಾಡ (Canada) ಪ್ರಧಾನಿ ಉಲ್ಟಾ ಹೊಡೆದಿದ್ದಾರೆ. ಇದನ್ನೂ ಓದಿ: ಭಾರತದ ಮೇಲಿನ ಕೆನಡಾ ಆರೋಪಕ್ಕೆ ಕಳವಳ ವ್ಯಕ್ತಪಡಿಸಿದ ಅಮೆರಿಕ
Advertisement
Advertisement
ಜೂನ್ 18 ರಂದು ಹರ್ದೀಪ್ ಸಿಂಗ್ ನಿಜ್ಜರ್ ಮೇಲೆ ಗುಂಡು ಹಾರಿಸಲಾಗಿತ್ತು. ಭಾರತವು ಈತನನ್ನು ಮೋಸ್ಟ್ ವಾಂಟೆಡ್ ಭಯೋತ್ಪಾದಕ ಎಂದು ಘೋಷಿಸಿತು ಎಂಬುವುದು ಉಲ್ಲೇಖನೀಯ. ಈ ಮಧ್ಯೆ ಜೂನ್ 18 ರಂದು ವ್ಯಾಂಕೋವರ್ ನ ಉಪನಗರವಾದ ಸರ್ರೆಯ ಗುರುದ್ವಾರದ ಬಳಿ ನಿಜ್ಜರ್ ನನ್ನು ಗುಂಡಿಕ್ಕಿ ಕೊಲ್ಲಲಾಯಿತು.
Advertisement
ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವೆ ಉದ್ವಿಗ್ನತೆ ನಿರಂತರವಾಗಿ ಹೆಚ್ಚುತ್ತಿದೆ. ಜಿ20 ಶೃಂಗಸಭೆಯ ಸಂದರ್ಭದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಖಲಿಸ್ತಾನಿಗಳ ಹಿಂಸಾಚಾರ ಹಾಗೂ ವಿದೇಶಿ ಹಸ್ತಕ್ಷೇಪದ ಕುರಿತು ಮಾತನಾಡಿದ್ದರು. ಈ ಮಾತುಕತೆಯ ಬಳಿಕ ಭಾರತ ಮತ್ತು ಕೆನಡಾದ ಸಂಬಂಧ ಹಳಸಿದೆ.
ಸಂಬಂಧ ಹಳಸಿದ ಬೆನ್ನಲ್ಲೇ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತ ಕೈವಾಡವಿದೆ ಎಂಬ ಕೆನಡಾ ಆರೋಪವನ್ನು ಭಾರತ ತಿರಸ್ಕರಿಸಿದೆ. ಅಲ್ಲದೆ ಕೆನಡಾದಲ್ಲಿರುವ ಭಾರತೀಯ ರಾಯಭಾರಿಯನ್ನು ಉಚ್ಛಾಟಿಸಿದ ಬೆನ್ನಲ್ಲೇ ಭಾರತ ಸರ್ಕಾರ ಕೆನಡಾ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದೆ.
Web Stories