ಬೆಂಗಳೂರು: ಲೋಕಸಭೆ ಚುನಾವಣೆಗೆ (Lok Sabha Election) ಸಚಿವರ ಸ್ಪರ್ಧೆ ಬಗ್ಗೆ ಸೂಚನೆ ಇನ್ನೂ ಬಂದಿಲ್ಲ. ಲೋಕಸಭಾ ಚುನಾವಣೆಗೆ ಪಕ್ಷದಲ್ಲಿ ಸಿದ್ಧತೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಅವರು ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣಾ ದೃಷ್ಟಿಯಿಂದ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ, ಎಲ್ಲಾ ಜಿಲ್ಲೆಗಳ ಅಧ್ಯಕ್ಷರು ಹಾಗೂ ಪ್ರಮುಖ ನಾಯಕರ ಜೊತೆ ಸುರ್ಜೇವಾಲ ಅವರು ಚರ್ಚೆ ನಡೆಸುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಬೇಕು. ರಾಜ್ಯದ ಎಲ್ಲಾ ನಾಯಕರ ಮೇಲೆ ಜವಾಬ್ದಾರಿ ಹೆಚ್ಚಿದೆ. ಕಳೆದ ಚುನಾವಣೆಗಿಂತ ಈ ಬಾರಿ ನಮ್ಮ ಪಕ್ಷ ಉತ್ತಮ ಸ್ಥಿತಿಯಲ್ಲಿದೆ. ಬಡ ಜನರ ಹಾಗೂ ಮಹಿಳೆಯರ ಆರ್ಥಿಕ ಮಟ್ಟ ಹೆಚ್ಚಿಸುವ ಉದ್ದೇಶದಿಂದ ನಮ್ಮ ಸರ್ಕಾರ ಅನುಷ್ಠಾನಗೊಳಿಸಿದ ಗ್ಯಾರಂಟಿ ಯೋಜನೆಗಳು ಹೆಚ್ಚು ಇಂಪ್ಯಾಕ್ಟ್ ಆಗಲಿದೆ. ಲೋಕಸಭಾ ಚುನಾವಣೆಯಲ್ಲಿ ಸಚಿವರು ಸ್ಪರ್ಧಿಸುವ ಬಗ್ಗೆ ಈವರೆಗೂ ಚರ್ಚೆಯಾಗಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರಕ್ಕೆ ನನ್ನ ಹೆಸರು ಕೇಳಿಬಂದಿತ್ತು. ಈ ಸಲ ಕೋಲಾರ ಕ್ಷೇತ್ರಕ್ಕೆ ಕೇಳಿಬರುತ್ತಿದೆ. ಆದರೆ, ಈ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುವ ಪ್ರಶ್ನೆ ಉದ್ಭವಿಸುವುದಿಲ್ಲ. ಸಚಿವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಕೆಪಿಸಿಸಿ ಅಧ್ಯಕ್ಷರು ಹೇಳಿದರೆ ಅಧಿಕೃತ ಎಂದರು. ಇದನ್ನೂ ಓದಿ: ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ: ಹಿ. ಪ್ರದೇಶದ ಕೈ ಸಚಿವ
Advertisement
Advertisement
ಹೆಚ್.ಡಿ.ಕುಮಾರಸ್ವಾಮಿ ಅವರು ದೊಡ್ಡವರು. ಅವರು ಸರ್ಕಾರದ ಅಭಿವೃದ್ಧಿ, ಜವಾಬ್ದಾರಿ ಕುರಿತು ಹೇಳಿಕೆ ನೀಡಿದರೆ ಪ್ರತಿಕ್ರಿಯಿಸಬಹುದು. ಅವರು ಬಳಸುವ ಅನಗತ್ಯ ಪದಗಳ ಬಗ್ಗೆ ಹೇಗೆ ಪ್ರ‍್ರತಿಕ್ರಿಯಿಸಬೇಕು. ನಾನು ಅವರೊಂದಿಗೆ 14 ತಿಂಗಳು ಕೆಲಸ ಮಾಡಿದ್ದೇನೆ. ಈ ರೀತಿ ಏಕೆ ಮಾತನಾಡುತ್ತಿದ್ದಾರೋ ನನಗೆ ಗೊತ್ತಿಲ್ಲ. ಅವರ ರೀತಿ ನನಗೆ ಮಾತನಾಡಲು ಬರುವುದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವುದರಿಂದ ಸರ್ಕಾರಕ್ಕೆ ಕಷ್ಟವಾಗಿಲ್ಲ. ಅನುದಾನ ಹೊಂದಿಕೆ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1.50 ಲಕ್ಷ ಕೋಟಿ ರೂ. ಬರಬೇಕು. ಈವರೆಗೂ ಬಂದಿಲ್ಲ. ಕೇಂದ್ರದಿಂದ ಅನುದಾನ ಬಂದಿದ್ದರೆ ಮತ್ತಷ್ಟು ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚು ಅನುಕೂಲವಾಗುತ್ತಿತ್ತು ಎಂದು ಹೇಳಿದರು. ಇದನ್ನೂ ಓದಿ: ದೇಶಕ್ಕೆ ಕ್ಯಾ. ಅಬ್ದುಲ್ ಹಮೀದ್ ಅವರಂಥವರು ಬೇಕು, ಜಿನ್ನಾ ಅಲ್ಲ: ನಿತ್ಯಾನಂದ್ ರೈ
Advertisement
ನಾರಾಯಣಗೌಡ ಅವರು ಬಿಡುಗಡೆ ನಂತರ ಮತ್ತೆ ಪ್ರತಿಭಟನೆ ನಡೆಸುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆ ನಡೆಸುವುದು ಹಕ್ಕು. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು, ಸಾರ್ವಜನಿಕ ಆಸ್ತಿ ಹಾನಿ ಮಾಡುವುದು ತಪ್ಪು. ಕಾನೂನು ಕೈಗೆತ್ತಿಗೊಳ್ಳದೆ ಶಾಂತಿಯುವಾಗಿ ಪ್ರತಿಭಟನೆ ನಡೆಸಲಿ ಎಂದು ಹೇಳಿದರು. ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಹತ್ವದ ಸಭೆ- ಕಾಂಗ್ರೆಸ್ ವೈಫಲ್ಯಗಳೇ ಕಮಲಕ್ಕೆ ಅಸ್ತ್ರ
Advertisement
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ. ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು. ಅಯೋದ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕು ಸಿದ್ಧ. ವಿಶೇಷ ಪೂಜೆ ಸಲ್ಲಿಸುತ್ತೇವೆ. ನಾವು ಹಿಂದುಗಳಲ್ವಾ? ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮುಚ್ಚಿಹೋಗಿದ್ದ ರಾಮಮಂದಿರದ ಗರ್ಭಗುಡಿ ತೆರೆಸಿದ್ದು ರಾಜೀವ್ ಗಾಂಧಿ: ಡಾ.ಎಂ.ಸಿ ಸುಧಾಕರ್