ಬೆಂಗಳೂರು: ಮೆಟ್ರೋ ಪಿಲ್ಲರ್ ದುರಸ್ತಿ ಕಾರ್ಯವನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದ್ದು, ಶನಿವಾರ ಹಾಗೂ ಭಾನುವಾರ ಮೆಟ್ರೋ ಸಂಚಾರ ಇರುತ್ತದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಟ್ರಿನಿಟಿ ಸಮೀಪವಿರುವ ಮೆಟ್ರೋ ಸೇತುವೆಯ ವಯಾಡಕ್ಟ್ ನಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಹೀಗಾಗಿ ಅದರ ದುರಸ್ತಿ ಕಾರ್ಯದ ಉದ್ದೇಶದಿಂದ ಶನಿವಾರ ಹಾಗೂ ಭಾನುವಾರ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಈ ಹಿಂದೆ ಹೇಳಿದ್ದರು. ಇದನ್ನು ಓದಿ: ಬಿರುಕು ಮೂಡಿದ್ದು ಯಾಕೆ? ಸಮಸ್ಯೆ ಹೇಗೆ ಪರಿಹರಿಸಲಾಗುತ್ತದೆ? ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಟ್ಟ ಮೆಟ್ರೋ ಎಂಡಿ ಅಜಯ್ ಸೇಠ್
Advertisement
Advertisement
ವಯಾಡಕ್ಟ್ ಕಾಂಕ್ರಿಟ್ ನಲ್ಲಿ ಬಿರುಕು ದುರಸ್ತಿ ಕಾಮಗಾರಿಗೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ದುರಸ್ತಿ ಕಾರ್ಯವನ್ನು ಮುಂದಿನ ವಾರ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಮೆಟ್ರೋ ಪ್ರಯಾಣಿಕರಿಗೆ ನಾಳೆ ಮೆಟ್ರೋ ಲಭ್ಯವಾಗಲಿದೆ.
Advertisement
ಸದ್ಯ ಬೈಯ್ಯಪ್ಪನಹಳ್ಳಿಯಿಂದ ಟ್ರಿನಿಟಿಯವರೆಗೆ ರೈಲುಗಳ ಸಂಚಾರಕ್ಕೆ ಏಕಪಥದಲ್ಲಿ ಅನುವು ಮಾಡಿಕೊಡಲಾಗಿದೆ. ಟ್ರಿನಿಟಿ ನಿಲ್ದಾಣದ ಬಳಿ ಸಂಚರಿಸುವ ಸಂದರ್ಭ ರೈಲುಗಳ ವೇಗವನ್ನು 35 ಕಿ.ಮೀ.ಗೆ ಇಳಿಸಲಾಗಿದೆ. ಸಾಮಾನ್ಯವಾಗಿ ಮೆಟ್ರೋ ಪ್ರತಿ ಗಂಟೆಗೆ 45 ಕಿ.ಮೀ. ವೇಗದಲ್ಲಿ ಸಂಚಾರ ಮಾಡುತ್ತದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv