ನವದೆಹಲಿ: ಕೇಂದ್ರ ಸರ್ಕಾರದ ನೋಟು ನಿಷೇಧದಿಂದಾಗಿ ದೇಶದ ಆರ್ಥಿಕತೆ ಸುಗಮವಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಟೀಕಾಕಾರಿಗೆ ಉತ್ತರಿಸಿದ್ದಾರೆ.
ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಗೊಳಿಸಿರುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೆ ಸರ್ಕಾರದ ಈ ಕ್ರಮದಿಂದ ಇಂದು ದೇಶದ ಆರ್ಥಿಕತೆ ಸುಗಮವಾಗಿ ನಡೆಯಲು ಸಹಾಯಕವಾಗಿದೆ. ಅಲ್ಲದೇ ದಾಖಲೆಯ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ ಎಂದಿದ್ದಾರೆ.
Advertisement
The phenomenal increase in the number of IT returns filed (in March 2014, it was 3.8 Cr. In 2017-18, this figure has grown to 6.86 Cr) is reflective of impact of demonetisation along with evidence of growing economy.
— Arun Jaitley (@arunjaitley) August 30, 2018
Advertisement
ನೋಟು ಅಮಾನ್ಯೀಕರಣದ ಮೊದಲು 2 ವರ್ಷಗಳಲ್ಲಿ ತೆರಿಗೆ ಸಂಗ್ರಹ ಕೇವಲ ಶೇ.6.6 ರಿಂದ ಶೇ.9 ರಷ್ಟಿತ್ತು. ನೋಟು ನಿಷೇಧದ ಬಳಿಕ ಇದರ ಪ್ರಮಾಣ ಶೇ.15 ರಿಂದ ಶೇ.18ಕ್ಕೆ ಗಣನೀಯವಾಗಿ ಏರಿಕೆಯಾಗಿದೆ. 2014 ರಲ್ಲಿ ಆದಾಯ ತೆರಿಗೆ ಪಾವತಿಸುತ್ತಿದ್ದವರ ಸಂಖ್ಯೆ ಕೇವಲ 3.8 ಕೋಟಿಯಷ್ಟಿತ್ತು, ಸದ್ಯ 2017-18ನೇ ಸಾಲಿನಲ್ಲಿ 6.86 ಕೋಟಿ ಗ್ರಾಹಕರು ಆದಾಯ ತೆರಿಗೆಯನ್ನು ಪಾವತಿ ಮಾಡುತ್ತಿದ್ದಾರೆ ಎಂದು ಹೇಳಿದರು.
Advertisement
ನೋಟು ಅಮಾನ್ಯೀಕರಣದಿಂದಾಗಿ 2016ರ ನವೆಂಬರ್ 8 ರವರೆಗು ಚಲಾವಣೆಯಲ್ಲಿದ್ದ 500 ಹಾಗೂ 1,000 ಮುಖಬೆಲೆಯ 15.41 ಲಕ್ಷ ಕೋಟಿ ರೂಪಾಯಿಗಳ ಪೈಕಿ 15.31 ಲಕ್ಷ ಕೋಟಿ ರೂಪಾಯಿಗಳು ಭಾರತೀಯ ರಿಸರ್ವ್ ಬ್ಯಾಂಕಿಗೆ ಜಮೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 15.3 ಲಕ್ಷ ಕೋಟಿ ರೂ. ಮೌಲ್ಯದ 99.3% ನಿಷೇಧಗೊಂಡಿದ್ದ ನೋಟುಗಳು ವಾಪಸ್: ಆರ್‌ಬಿಐ
Advertisement
ಟೀಕೆ ಏನು:
ಪ್ರಧಾನಿ ನರೇಂದ್ರ ಮೋದಿಯವರು 2016 ರ ನವೆಂಬರ್ 8 ರಂದು 500 ಹಾಗೂ 1,000 ಮುಖ ಬೆಲೆಯ ನೋಟುಗಳನ್ನು ಅಮಾನ್ಯೀಕರಣಗೊಳಿಸಿದ್ದರು. ಇದರ ಸಂಬಂಧ ಆರ್‍ಬಿಐ ಇತ್ತೀಚೆಗೆ ನೋಟು ಅಮಾನ್ಯೀಕರಣದಿಂದಾಗಿ ಚಲಾವಣೆಯಲ್ಲಿದ್ದ ಬಹುತೇಕ ಎಲ್ಲಾ 500 ಹಾಗೂ 1,000 ಸಾವಿರ ಮುಖಬೆಲೆಯ ನೋಟುಗಳು ಬ್ಯಾಂಕುಗಳಿಗೆ ಜಮೆಯಾಗಿದೆ ಎಂದು ವರದಿ ನೀಡಿತ್ತು. ಈ ವರದಿಯು ದೇಶಾದ್ಯಂತ ವಾಪಕ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದಲ್ಲದೆ, ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಣಮಾಡುವ ಮೂಲಕ ಏನು ಸಾಧನೆ ಮಾಡಿದೆ ಎಂಬ ವ್ಯಾಪಕ ಟೀಕೆಗಳು ಕೇಳಿಬಂದಿದ್ದವು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv