ವಾಷಿಂಗ್ಟನ್: ಪಾಕಿಸ್ತಾನದಲ್ಲಿ ಭಾರತದ ಕ್ಷಿಪಣಿಯೊಂದು ಬಿದ್ದಿದ್ದು, ಆಕಸ್ಮಿಕವಲ್ಲದೆ ಬೇರೇನೂ ಅಲ್ಲ ಎಂದು ಅಮೆರಿಕ ಹೇಳಿದೆ.
Advertisement
ಎರಡು ದಿನಗಳ ಹಿಂದೆ ಭಾರತೀಯ ಸೂಪರ್‍ಸಾನಿಕ್ (supersonic missile) ಕ್ಷಿಪಣಿ ಆಕಸ್ಮಿಕವಾಗಿ ಉಡಾವಣೆಯಾಗಿ, ಈ ಕ್ಷಿಪಣಿ ಪಾಕಿಸ್ತಾನಕ್ಕೆ ಬಂದು ಬಿದ್ದಿತ್ತು. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಭಾರತ ಸರ್ಕಾರ, ಇದು ಆಕಸ್ಮಿಕವಾಗಿ ಉಡಾವಣೆ ಆಗಿದೆ. ಮಾರ್ಚ್ 9 ರಂದು ತಾಂತ್ರಿಕ ದೋಷದಿಂದಾಗಿ ಆಕಸ್ಮಿಕವಾಗಿ ಕ್ಷಿಪಣಿ ಉಡಾವಣೆ ಆಗಿತ್ತು. ಘಟನೆಯು ತೀವ್ರ ವಿಷಾದನೀಯವಾಗಿದ್ದರೂ, ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ವಿಷಯವಾಗಿದೆ ಎಂದು ತಿಳಿಸಿತ್ತು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಬಿತ್ತು ಭಾರತದ ಕ್ಷಿಪಣಿ- ಭಾರತ ಹೇಳಿದ್ದೇನು?
Advertisement
Advertisement
ಈ ಕುರಿತಂತೆ ಸೋಮವಾರ ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಸುದ್ದಿಗೋಷ್ಠಿಯಲ್ಲಿ ನಮ್ಮ ಭಾರತೀಯ ಪಾಲುದಾರರು ನಿಮಗೆ ಹೇಳಿರುವಂತೆ ಈ ಘಟನೆಯು ಆಕಸ್ಮಿಕವಲ್ಲದೆ ಬೇರೇನೂ ಅಲ್ಲ ಮತ್ತು ಇದರಲ್ಲಿ ಯಾವುದೇ ಸೂಚನೆ ಕೂಡ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕ್ಷಿಪಣಿ ಬಗ್ಗೆ ಭಾರತಕ್ಕೆ ಪ್ರತ್ಯುತ್ತರ ನೀಡೋ ಬದಲು ಪಾಕಿಸ್ತಾನ ಸಂಯಮ ಬಯಸುತ್ತೆ: ಇಮ್ರಾನ್ ಖಾನ್
Advertisement
ಈ ಘಟನೆ ಬಗ್ಗೆ ನಿಮಗೆ ವಿವರಿಸುವಂತೆ ಭಾರತೀಯ ರಕ್ಷಣಾ ಸಚಿವಾಲಯಕ್ಕೆ ತಿಳಿಸಿದೇವು. ಹಾಗಾಗಿ ಮಾರ್ಚ್ 9 ರಂದು ನಿಖರವಾಗಿ ಏನಾಯಿತು ಎಂಬುದರ ಬಗ್ಗೆ ವಿವರಣೆ ನೀಡಿದರು. ಅದಕ್ಕಿಂತ ಹೆಚ್ಚಿನ ಪ್ರತಿಕ್ರಿಯೆ ನಾವು ನೀಡಬೇಕಾಗಿಲ್ಲ ಎಂದು ಹೇಳಿದ್ದಾರೆ.