Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲೆ ಮಹದೇಶ್ವರ ಬೆಟ್ಟವನ್ನ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಲೆ ಮಹದೇಶ್ವರ ಬೆಟ್ಟವನ್ನ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

Bengaluru City

ಮಲೆ ಮಹದೇಶ್ವರ ಬೆಟ್ಟವನ್ನ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

Public TV
Last updated: July 8, 2025 4:34 pm
Public TV
Share
2 Min Read
Eshwar Khandre 3
SHARE

– ಅರಣ್ಯ, ವನ್ಯಜೀವಿ ರಕ್ಷಣೆಗೆ ಕಮಾಂಡ್ ಸೆಂಟರ್

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ (Male Mahadeshwara Hill) ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗುತ್ತಿದ್ದು, ಈ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ ವನ್ಯಜೀವಿ ಪರಿಪಾಲಕರು ಸೇರಿದಂತೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಲೆ ಮಹಾದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಮಾಡಲು ಕ್ರಮ ವಹಿಸುವಂತೆ ಹಾಗೂ ಎಲ್ಲ ಬಾಧ್ಯಸ್ಥರ ಸಭೆ ಕರೆದು ಚರ್ಚಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆಯಿಂದ ಮೈಲಿಗಲ್ಲು – 500 ಕೋಟಿ ತಲುಪಲಿರುವ ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ

ರಾಜ್ಯದಲ್ಲಿ ವನ್ಯಜೀವಿಗಳ ಅಸಹಜ ಸಾವನ್ನು ನಿಯಂತ್ರಿಸಲು ಮತ್ತು ವನ್ಯ ಮೃಗಗಳ ದಾಳಿಯಿಂದ ಅಮೂಲ್ಯ ಜೀವಹಾನಿ ಆಗುವುದನ್ನು ತಡೆಯಲು ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ, ಆಯಾ ವಲಯದಲ್ಲಿ ಅಧಿಕಾರಿ, ಸಿಬ್ಬಂದಿಗೆ ಹೊಣೆಗಾರಿಕೆ ನಿಗದಿಪಡಿಸುವಂತೆ ನಿರ್ದೇಶನ ನೀಡಿದ್ದಾರೆ.

ಕೇಂದ್ರೀಕೃತ ಕಮಾಂಡ್ ಸೆಂಟರ್:
ರಾಜ್ಯದಲ್ಲಿ ಸುಮಾರು 40 ಸಾವಿರ ಚದರ ಕಿ.ಮೀ. ಅರಣ್ಯ ಪ್ರದೇಶವಿದ್ದು, ಇದನ್ನು ಭೌತಿಕವಾಗಿ ಕಾವಲು ಕಾಯುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ವನ್ಯಜೀವಿಗಳ ಕಳ್ಳಬೇಟೆ ಮತ್ತು ಅರಣ್ಯ ಒತ್ತುವರಿ, ಮರಗಳ ಅಕ್ರಮ ಕಡಿತ ಆಗದಂತೆ ನಿಗ್ರಹಿಸಲು ಕೃತಕ ಬುದ್ಧಿಮತ್ತೆ, ಡ್ರೋನ್ ಕ್ಯಾಮೆರಾ, ಕಾಡಿನಂಚಿನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ, ಎಲ್ಲ ಕ್ಯಾಮೆರಾಗಳ ದೃಶ್ಯಗಳ ಆಧಾರದಲ್ಲಿ ವನ್ಯಮೃಗ ಮತ್ತು ಕಳ್ಳಬೇಟೆಗಾರರ ಚಲನವಲನದ ಬಗ್ಗೆ ನಿಗಾ ಇಡಲು ಕೇಂದ್ರೀಕೃತ ಕಮಾಂಡ್ ಸೆಂಟರ್ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಚಾಣಕ್ಯ ವಿವಿಗೆ ಹಂಚಿಕೆಯಾಗಿದ್ದ ಭೂಮಿಗೆ ಲ್ಯಾಂಡ್ ಆಡಿಟ್ – ಜಮೀನು ವಾಪಸ್ ಪಡೆಯುತ್ತಾ ಸರ್ಕಾರ?

ಖಾಲಿ ಹುದ್ದೆಗಳ ಭರ್ತಿಗೆ ಸೂಚನೆ:
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪಟ್ಟಿ ಮಾಡಿ, ನೇಮಕಾತಿಗೆ ಪ್ರಕ್ರಿಯೆ ಆರಂಭಿಸಲು ಮತ್ತು ತಕ್ಷಣ ಅಗತ್ಯವಿರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಕೂಡಲೇ ನೇಮಕಾತಿ ಮಾಡಿಕೊಳ್ಳಲು ಮತ್ತು ವನ, ವನ್ಯಜೀವಿ ಸಂರಕ್ಷಣೆಗೆ ಅಗತ್ಯವಾದ ವಾಹನ, ಉಪಕರಣಗಳ ಖರೀದಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ಕೊಹ್ಲಿಗಾಗಿ ಆರ್‌ಸಿಬಿಯ ಆತುರವೇ ಕಾಲ್ತುಳಿತಕ್ಕೆ ಕಾರಣ – ಸಿಐಡಿ ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು

ಕಾಡಿನಂಚಿನ ಗ್ರಾಮಗಳ ಜನರೊಂದಿಗೆ ಅರಣ್ಯಾಧಿಕಾರಿಗಳು ಸೌಹಾರ್ದಯುತ ಸಂಬಂಧ ಹೊಂದಬೇಕು. ಜನರಿಗೆ ಅರಣ್ಯ ಮತ್ತು ವನ್ಯಜೀವಿಗಳ ಮಹತ್ವ ತಿಳಿಸಿಕೊಡಬೇಕು. ಕಾಡಿನಂಚಿನ ಜನರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಬೇಕು. ಕೌಶಲ್ಯ ತರಬೇತಿ ಕೊಡಿಸಬೇಕು. ಆಗ ಅರಣ್ಯ ಮತ್ತು ವನ್ಯಜೀವಿ ರಕ್ಷಣೆಗೆ ಜನರೇ ಮುಂದಾಗುತ್ತಾರೆ. ಈ ರೀತಿಯ ವಾತಾವರಣ ಸೃಷ್ಟಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

TAGGED:bengaluruChamarajanagaraeshwar khandreMale Mahadeshwara bettaಈಶ್ವರ್ ಖಂಡ್ರೆಚಾಮರಾಜನಗರಬೆಂಗಳೂರುಮಲೆ ಮಹದೇಶ್ವರ ಬೆಟ್ಟ
Share This Article
Facebook Whatsapp Whatsapp Telegram

Cinema news

Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood

You Might Also Like

junaid ahmed terrorist
Bengaluru City

ಶಂಕಿತ ಉಗ್ರ ಜುನೈದ್ ಅಹಮ್ಮದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್‌ಐಎ

Public TV
By Public TV
10 minutes ago
Nirmala Sitharaman
Districts

ರಾಮನಗರಕ್ಕಿಂದು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

Public TV
By Public TV
50 minutes ago
KMF
Bengaluru City

ನಂದಿನಿ ನಕಲಿ ತುಪ್ಪದ ಹಾವಳಿ ತಡೆಗೆ ಕ್ರಮ – ಕೆಎಂಎಫ್‌ನಿಂದ ಮಾಸ್ಟರ್ ಪ್ಲ್ಯಾನ್

Public TV
By Public TV
1 hour ago
women suicide mysuru
Crime

ಮೈಸೂರು| ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ

Public TV
By Public TV
1 hour ago
donald trump
Latest

ಭಾರತ-ಪಾಕ್‌ ಯುದ್ಧ ನಿಲ್ಲಿಸದಿದ್ರೆ 200% ಸುಂಕ ಹಾಕ್ತೀನಿ ಅಂತ ಎಚ್ಚರಿಸಿದ್ದೆ: ಟ್ರಂಪ್‌ ಪುನರುಚ್ಚಾರ

Public TV
By Public TV
1 hour ago
Mantralaya 1
Districts

ಮಂತ್ರಾಲಯದಲ್ಲಿ ಅದ್ದೂರಿಯಾಗಿ ನಡೆದ ತೆಪ್ಪೋತ್ಸವ – ಎಲ್ಲೆಡೆ ಗುರುವೈಭವೋತ್ಸವ ಸಂಭ್ರಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?