ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ (Rajya Sabha Election) ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ JDS ಇಬ್ಬರು ಶಾಸಕರಿಗೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ನೋಟಿಸ್ ಜಾರಿ ಮಾಡಿದ್ದಾರೆ.
ಕೋಲಾರ ಶಾಸಕ ಶ್ರೀನಿವಾಸಗೌಡ (Srinivas Gowda) ಹಾಗೂ ಗುಬ್ಬಿ ಶಾಸಕ ಶ್ರೀನಿವಾಸ್‌ಗೆ (Gubbi Srinivas) ನೋಟಿಸ್ ಜಾರಿ ಮಾಡಿದ್ದು, ಲಿಖಿತ ರೂಪದಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ JDS ಇಬ್ಬರು ಶಾಸಕರು ಉಚ್ಚಾಟನೆ
Advertisement
Advertisement
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಶಾಸಕರನ್ನ ಅನರ್ಹ ಮಾಡುವಂತೆ ವಿಧಾನಸಭೆ ಕಾರ್ಯದರ್ಶಿಗಳಿಗೆ ಜೆಡಿಎಸ್ ಪಕ್ಷದಿಂದ ದೂರು ನೀಡಲಾಗಿತ್ತು. ಜೆಡಿಎಸ್ ದೂರು ಹಿನ್ನೆಲೆಯಲ್ಲಿ ವಿವರಣೆ ಕೇಳಿ ಮಾಡಿದ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರ ಅರೆ ನ್ಯಾಯಿಕ ಪ್ರಾಧಿಕಾರ ನೋಟಿಸ್ ಜಾರಿ ಮಾಡಿದೆ.
Advertisement
Advertisement
ರಾಜ್ಯಸಭಾ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಲೇಹರ್‌ಸಿಂಗ್ ಪರ ಮತದಾನ ಮಾಡಿದ್ದಾರೆ ಎಂದು ಗುಬ್ಬಿ ಶ್ರೀನಿವಾಸ್ ವಿರುದ್ಧ ಆರೋಪಿಸಲಾಗಿತ್ತು. ಇನ್ನು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ಬಹಿರಂಗವಾಗಿ ಕೋಲಾರ ಶ್ರೀನಿವಾಸಗೌಡ ಹೇಳಿದ್ದರು. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ನಿಯಮದಡಿ ಇಬ್ಬರು ಶಾಸಕರ ಸದಸ್ಯತ್ವ ಅನರ್ಹತೆಗೆ ಜೆಡಿಎಸ್ ದೂರು ನೀಡಿತ್ತು. ಜೆಡಿಎಸ್ ದೂರು ವಿಚಾರ ನಡೆಸಿದ ವಿಧಾನಸಭೆ ಸಭಾಧ್ಯಕ್ಷರ ಅರೆ ನ್ಯಾಯಿಕ ಪ್ರಾಧಿಕಾರ ವಿವರಣೆ ನೀಡುವಂತೆ ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಅಡ್ಡ ಮತದಾನ: ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ದೂರಿಗೆ JDS ನಿರ್ಧಾರ