ಬೆಂಗಳೂರು: ಪವಿತ್ರಾ ಗೌಡ (Pavithra Gowda) ಬಂಧನವಾದಾಗ ವಿಚಾರಣೆ ಮಾಡುವ ತಂಡದಲ್ಲಿದ್ದ ವಿಜಯನಗರ ಮಹಿಳಾ ಪಿಎಸ್‌ಐಗೆ ನೋಟಿಸ್ ನೀಡಲಾಗಿದೆ.
ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಮಹಿಳಾ ಪಿಎಸ್‌ಐ ನೋಟಿಸ್ ನೀಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದನ್ನೂ ಓದಿ:
ಜೂನ್ 8 ರಂದು ರೇಣುಕಾಸ್ವಾಮಿ ಅಪಹರಣ ಮಾಡಿ ಕೊಲೆ ಮಾಡಲಾಗಿತ್ತು. ಮೃತದೇಹವನ್ನು ಸುಮನಹಳ್ಳಿ ಮೋರಿಯಲ್ಲಿ ಬಿಸಾಕಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 10 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.
ಆರೋಪಿಗಳ ವಿಚಾರಣೆ ನಡೆಯುತ್ತಿದ್ದು, ಪ್ರಕರಣಕ್ಕೆ ಈಗ ಮತ್ತೊಂದು ತಿರುವು ಸಿಕ್ಕಿದೆ. ಪವಿತ್ರಾ ಎಂಬವರಿಗೆ ಉದ್ಯಮಿಯಾಗಿದ್ದ ಸೌಂದರ್ಯ ಜಗದೀಶ್ 2 ಕೋಟಿ ರೂ. ಹಣ ಕೊಟ್ಟಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಈ ಹಣ ನೀಡಲಾಗಿತ್ತೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.