ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧ ಗೂಂಡಾ ಎಂದು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ (Yathindra Siddaramaiah) ನೋಟಿಸ್ ನೀಡಲಾಗಿದೆ.
ಆಕ್ಷೇಪಾರ್ಹ ಹೇಳಿಕೆ ಬಗ್ಗೆ ವಿವರ ನೀಡುವಂತೆ ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿ ನೋಟಿಸ್ ನೀಡಿದ್ದಾರೆ. ಸಹಾಯಕ ಚುನಾವಣಾಧಿಕಾರಿ, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳಿಂದ ವರದಿ ಪಡೆದು ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಅಮಿತ್ ಶಾ ಓರ್ವ ಗೂಂಡಾ, ರೌಡಿ ಗುಜರಾತ್‍ನಲ್ಲಿ ನರಮೇಧ ಮಾಡಿದ್ರು: ಯತೀಂದ್ರ ಸಿದ್ದರಾಮಯ್ಯ
Advertisement
Advertisement
ನೋಟಿಸ್ ನೀಡಿರುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ಖಚಿತಪಡಿಸಿದ್ದಾರೆ. ಮಾ.29 ರಂದು ಹನೂರು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಮಿತ್ ಶಾ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾತಿಗೆ ಬಿಜೆಪಿ ನಾಯಕರಿಂದ ಆಕ್ಷೇಪ ವ್ಯಕ್ತವಾಗಿತ್ತು.
Advertisement
Advertisement
ಅಮಿತ್ ಶಾ ಓರ್ವ ಗೂಂಡಾ, ರೌಡಿ. ಗುಜರಾತ್‍ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯುಳ್ಳ ಇಂತಹವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಯತೀಂದ್ರ ಹೇಳಿಕೆ ನೀಡಿದ್ದರು. ಇದನ್ನೂ ಓದಿ: 41 ಕೋಟಿ ರೂ. ಆಸ್ತಿ ಘೋಷಿಸಿದ ಹಾಸನದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್