ಬೆಂಗಳೂರು: ಗೂಗಲ್‌ನಲ್ಲಿ ಹುಡುಕಿ ಡ್ರಗ್ಸ್ ಖರೀದಿಸಿ ಮಾರಾಟ ಮಾಡುತ್ತಿದ್ದ ಇಲ್ಲಿನ ನೇಪಾಳಿ ಸೆಕ್ಯೂರಿಟಿ ಗಾರ್ಡ್ ಒಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬಾಗಲೂರಿನ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಆರೋಪಿಯನ್ನು ಬಂಧಿಸಿದ್ದು, 3 ಲಕ್ಷ ಮೌಲ್ಯದ 10 ಗ್ರಾಂ ಎಂಡಿಎಂಎ ಡ್ರಗ್ಸ್ ಹಾಗೂ 80 ಗ್ರಾಂ ಚರಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ಶೌಚಾಲಯದಲ್ಲಿ 12ರ ಹುಡುಗಿ ಮೇಲೆ ಅತ್ಯಾಚಾರ
Advertisement
Advertisement
ಘಟನೆ ಸಂಬಂಧ ಮಾಹಿತಿ ನೀಡಿರುವ ಅಧಿಕಾರಿಗಳು, ನೇಪಾಳದಿಂದ ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಬಂದಿದ್ದ ಈತ ಗೂಗಲ್‌ನಲ್ಲಿ ಹುಡುಕಿ ಡ್ರಗ್ಸ್ ಖರೀದಿ ಮಾಡಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಒಂದು ಗ್ರಾಂಗೆ 5 ರಿಂದ 10 ಸಾವಿರ ರೂ. ಪಡೆಯುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಿದ್ದು, ಆತನ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement