ಮಂಡ್ಯ: ಕನಗನಮರಡಿ ಗ್ರಾಮದಲ್ಲಿ ಬಸ್ ನಾಲೆಗೆ ಉರುಳಿ 30 ಜನ ಮೃತಪಟ್ಟ ದುರಂತದ ನಂತರ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.
ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ದುರಂತ ಸಂಭವಿಸಿದ ಮಾರ್ಗದಲ್ಲಿ ಸಂಚರಿಸಲು ಎರಡು ಸರ್ಕಾರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಬಸ್ ಇಲ್ಲದೇ ಇರುವುದು ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಕಣ್ಣೀರು ಹಾಕಿದ್ದರು.
Advertisement
ಸ್ಥಳೀಯರ ಕಷ್ಟ ಆಲಿಸಿ ಸಿಎಂ ಕುಮಾರಸ್ವಾಮಿ ಕೂಡಲೇ ಸರ್ಕಾರಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ. ಸದ್ಯ ಈಗ ಮುಖ್ಯಮಂತ್ರಿ ಸೂಚನೆ ಮೇರೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
Advertisement
Advertisement
ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ನಾಲೆಗೆ ಉರುಳಿತ್ತು. ಖಾಸಗಿ ಬಸ್ ಪ್ರತಿನಿತ್ಯ ಎರಡು ಬಾರಿ ಸಂಚರಿಸುತ್ತಿತ್ತು. ಬಸ್ ಸಂಪೂರ್ಣ ನೀರಿನಲ್ಲಿ ಮುಳುಗಿದ್ದು, ಈ ಅವಘಡದಲ್ಲಿ 30 ಜನರು ಸಾವನ್ನಪ್ಪಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ನಾಲೆಗೆ ಹರಿಸುವ ನೀರನ್ನು ನಿಲ್ಲಿಸಲಾಗಿದ್ದು, ಘಟನೆಯಲ್ಲಿ ಓರ್ವ ಬಾಲಕ ಮಾತ್ರ ಬದುಕುಳಿದಿದ್ದಾನೆ.
Advertisement
ಶನಿವಾರ ಆಗಿದ್ದರಿಂದ ಮಕ್ಕಳು ಶಾಲೆ ಮುಗಿಸಿಕೊಂಡು ಬಸ್ ನಲ್ಲಿ ಮನೆಯತ್ತ ತೆರಳುತ್ತಿದ್ದರು. ಬಸ್ ನಾಲೆಗೆ ಉರುಳುತ್ತಿದ್ದಂತೆಯೇ ತಕ್ಷಣವೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಗ್ಗದ ಸಹಾಯದಿಂದ ಪ್ರಯಾಣಿಕರ ರಕ್ಷಣೆಗೆ ಮುಂದಾಗಿದ್ದರು. ಗ್ರಾಮಸ್ಥರು ಇದೂವರೆಗೂ 20ಕ್ಕೂ ಅಧಿಕ ಶವಗಳನ್ನು ಹೊರ ತೆಗೆದಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv