ಪಾಟ್ನಾ: ಎರಡನೇ ಮದುವೆಯಾಗಲು ಬಯಸುವ ಸರ್ಕಾರಿ ಉದ್ಯೋಗಿಗಳು ತಮ್ಮ ಇಲಾಖೆಗಳಿಗೆ ಸೂಚಿಸಿ ಅಗತ್ಯ ಅನುಮತಿಯನ್ನು ಪಡೆದ ನಂತರವೇ ಮುಂದುವರಿಯಬೇಕು ಎಂದು ಬಿಹಾರದ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ.
ಬಿಹಾರದ ಸರ್ಕಾರವು ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು, ಎಲ್ಲ ಸರ್ಕಾರಿ ಅಧಿಕಾರಿಗಳು ತಮ್ಮ ವೈವಾಹಿಕ ಜೀವನದ ಬಗ್ಗೆ ತಮ್ಮ ಇಲಾಖೆಗಳಿಗೆ ಅಗತ್ಯ ಅನುಮತಿ ಕೊಟ್ಟ ನಂತರವೇ ಎರಡನೇ ಮದುವೆಗೆ ಅರ್ಹರಾಗಬೇಕೆಂದು ನಿರ್ದೇಶಿಸಿದೆ.
Advertisement
Advertisement
ಅಧಿಸೂಚನೆಯಲ್ಲಿ ಏನಿದೆ?
ಎರಡನೇ ಬಾರಿಗೆ ಮದುವೆಯಾಗಲು ಬಯಸುವ ಯಾವುದೇ ಉದ್ಯೋಗಿ ಮೊದಲು ಅವನ ಅಥವಾ ಅವಳ ಸಂಗಾತಿಯಿಂದ ಕಾನೂನುಬದ್ಧವಾಗಿ ಪ್ರತ್ಯೇಕವಾದ ದಾಖಲೆಗಳನ್ನು ಸಂಬಂಧಿಸಿದ ಇಲಾಖೆಗೆ ನೀಡಬೇಕು. ಉದ್ಯೋಗಿಯ ಮೊದಲ ಪತ್ನಿ ಅಥವಾ ಪತಿ ವಿರೋಧಿಸಿದರೆ, ಎರಡನೇ ಪತ್ನಿ ಅಥವಾ ಪತಿಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ನಿರಾಕರಿಸಲಾಗುತ್ತದೆ. ಇದನ್ನೂ ಓದಿ: ಯೋಧರು ಸೇರಿ ಐವರ ಪ್ರಾಣ ಉಳಿಸಿದ ಮೃತ ಮಹಿಳೆಯ ಅಂಗಾಂಗ
Advertisement
Advertisement
ಸರ್ಕಾರಿ ನೌಕರನು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೆ ಎರಡನೇ ಮದುವೆಯಾಗಿ ಸೇವಾ ಅವಧಿಯಲ್ಲಿ ಮರಣಹೊಂದಿದರೆ, ಅವನ ಅಥವಾ ಅವಳ ಎರಡನೇ ಪತ್ನಿ ಅಥವಾ ಪತಿ ಮತ್ತು ಅವರ ಮಕ್ಕಳು ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ಅರ್ಹರಾಗಿರುವುದಿಲ್ಲ. ರಾಜ್ಯ ಸರ್ಕಾರ ಮೊದಲ ಪತ್ನಿಯ ಮಕ್ಕಳಿಗೆ ಆದ್ಯತೆ ನೀಡಲಿದೆ.
ಈ ಆದೇಶವನ್ನು ಎಲ್ಲ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಪೊಲೀಸ್ ಮಹಾನಿರ್ದೇಶಕರು(ಡಿಜಿಪಿ), ಡಿಜಿಪಿ ಹೋಮ್ ಗಾರ್ಡ್, ಡಿಜಿಪಿ ಕಾರಾಗೃಹ ಮತ್ತು ಸಂಬಂಧಪಟ್ಟ ಪ್ರತಿಯೊಬ್ಬ ಅಧಿಕಾರಿಯನ್ನು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ಸೂಚಿಸಿದೆ. ಇದನ್ನೂ ಓದಿ: ವೀಡಿಯೋ ಬಂದ್ ವಿಚಾರ – ಯಾರು ಏನೇ ಹೇಳಲಿ, ಈಗ ಮೊದಲಿನಂತೆ ನಿಯಮ ಇರಲಿದೆ: ಸಿಎಂ