ಬೆಂಗಳೂರು: ಈ ಹಿಂದೆ ನಾನು ಸ್ಪೀಕರ್ ಆಗಿದ್ದಾಗ ಕೆಲವು ಸಾಂವಿಧಾನಿಕ ಮಿತಿಗಳಿದ್ದವು. ಆ ಸ್ಥಾನದಲ್ಲಿದ್ದಾಗ ಮುಕ್ತವಾಗಿ ಮಾತನಾಡಲು ಆಗುತ್ತಿರಲಿಲ್ಲ. ಆದರೆ ಈಗ ಸಚಿವನಾಗಿ ಮುಕ್ತವಾಗಿ ಮಾತನಾಡಲು ಸಾಧ್ಯವಾಗುತ್ತಿದೆ. ಸದ್ಯಕ್ಕೆ ನನಗೆ ಖುಷಿಯಾಗುತ್ತಿದೆ ಸಚಿವ ಯು.ಟಿ ಖಾದರ್ (UT Khader) ಎಂದು ಹೇಳಿದ್ದಾರೆ.
ಇಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಯು.ಟಿ ಖಾದರ್ ವಿಧಾನಸೌಧದಲ್ಲಿ (Vidhan Soudha) ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ವಿಧಾನಸೌಧದ ಮೆಟ್ಟಿಲುಗಳಿಗೆ ಅಡ್ಡಬಿದ್ದು ಪ್ರಜಾ ದೇಗುಲ ಪ್ರವೇಶಿಸಿದ ಸಿಎಂ ಡಿಕೆಶಿ
ತಮಗೆ ಸಿಗಲಿರುವ ಸಚಿವ ಸ್ಥಾನದ ಜವಾಬ್ದಾರಿಯ ಬಗ್ಗೆ ಮಾತನಾಡಿದ ಅವರು, ಇಂದು ಸಚಿವ ಸ್ಥಾನದ ಪ್ರಮಾಣ ವಚನ ಸ್ವೀಕಾರ ಮಾಡಿದ್ದೇನೆ ನಿಜ, ಆದರೆ ನನಗೆ ಇನ್ನೂ ಯಾವ ಖಾತೆ ಸಿಗುತ್ತದೆ ಎಂದು ಗೊತ್ತಿಲ್ಲ. ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳು ನನಗೆ ಯಾವುದೇ ಖಾತೆ ಕೊಟ್ಟರೂ ಅದನ್ನ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ. ಜನರಿಗಾಗಿ ಉತ್ತಮ ಕೆಲಸ ಮಾಡಲು ನಮಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ, ಅದನ್ನ ಸಾರ್ಥಕ ಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ನನ್ನ ಹೆಗಲ ಮೇಲಿರೋದು ಸಿಎಂ ಜವಾಬ್ದಾರಿಯಲ್ಲ, ಕನ್ನಡಿಗರ ಕನಸು ನನಸು ಮಾಡುವ ಕರ್ತವ್ಯ: ನೂತನ ಸಿಎಂ ಡಿಕೆಶಿ
ಮುಂದಿನ ಸಂಪುಟ ವಿಸ್ತರಣೆ ಹಾಗೂ ಹೊಸ ಸಚಿವರ ಸೇರ್ಪಡೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖಾದರ್, ಮುಂದಿನ ಸಚಿವರು ಯಾರಾಗುತ್ತಾರೆ ಎಂಬ ಬಗ್ಗೆ ಸದ್ಯಕ್ಕೆ ನನಗೇನೂ ಮಾಹಿತಿ ಇಲ್ಲ. ಆದರೆ ನಮ್ಮ ಸರ್ಕಾರದಲ್ಲಿ ನಾವೆಲ್ಲರೂ ಒಂದು ಟೀಮ್ ಆಗಿ ಕೆಲಸ ಮಾಡುತ್ತೇವೆ. ಒಟ್ಟಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್


