ಚಿಕ್ಕಬಳ್ಳಾಪುರ: ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ (BY Vijayendra) ಆಯ್ಕೆ ಹಿನ್ನೆಲೆ ಮಾಜಿ ಸಚಿವ ಸಿಟಿ ರವಿ (CT Ravi) ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಮಧ್ಯಪ್ರದೇಶದಿಂದ ಆಗಮಿಸಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬದಲಾಗದೇ ಇರೋದು ಕಾರ್ಯಕರ್ತ ಅನ್ನೋದು. ಈಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಪಕ್ಷ ನೇಮಕ ಮಾಡಿದೆ. ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟುವ, ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ, ಯಶಸ್ವಿಯಾಗಲಿ ಎಂದು ತಿಳಿಸಿದರು. ಇದನ್ನೂ ಓದಿ: ಸಾಮಾನ್ಯ ಕಾರ್ಯಕರ್ತನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ – ಸಿಹಿ ತಿನ್ನಿಸಿ, ಸನ್ಮಾನಿಸಿ ಸಂಭ್ರಮಾಚರಣೆ
Advertisement
Advertisement
ನೂತನ ಅಧ್ಯಕ್ಷನ ಆಯ್ಕೆ ಬಗ್ಗೆ ಕಾಂಗ್ರೆಸ್ (Congress) ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಸಮಾಧಾನದ ಬಗ್ಗೆ ಈಗ ನಾನು ಏನು ಮಾತನಾಡಲ್ಲ. ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೇನೆ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವರೆಗೂ ಜವಾಬ್ದಾರಿ ನಿರ್ವಹಿಸಿದ್ದೇನೆ. ಈಗಾಗಲೆ ಬಹಳ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದರೇ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ ಎಂದು ಹೇಳಿದರು. ಇದನ್ನೂ ಓದಿ: ಸಿ.ಟಿ.ರವಿ ಆಪ್ತನಿಂದಲೇ ಬಿಜೆಪಿಗೆ ಭಾರೀ ಮುಖಭಂಗ; ಅವಿಶ್ವಾಸ ಮಂಡನೆಯಲ್ಲಿ ಬಿಜೆಪಿಗೆ ಸೋಲು
Advertisement