ಬೆಂಗಳೂರು: ಇಲ್ಲಿಯವರೆಗೆ ರೌಡಿ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೆವು. ಇನ್ನು ಮುಂದೆ ರೌಡಿಗಳ ಅಕ್ರಮ ಆಸ್ತಿಗಳನ್ನು ಕಲೆ ಹಾಕಲಾಗುವುದು ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಬಾಳ್ಕರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾರ್ವಜನಿಕರ ಹಿತಾಸಕ್ತಿ ಕಾಪಾಡುವುದು ನಮ್ಮ ಹೊಣೆ. ಕಾನೂನು ಸುವ್ಯವಸ್ಥೆ ವಿರುದ್ಧವಾಗಿದ್ದವರನ್ನು ಸುಮ್ಮನೇ ಬಿಡುವುದಿಲ್ಲ. ಸಾರ್ವಜನಿಕರು ಧೈರ್ಯವಾಗಿ ಮುಂದೆ ಬಂದು ದೂರು ನೀಡಿ. ಸ್ಥಳೀಯ ಠಾಣೆಗಳಿಗೆ ದೂರು ನೀಡಿ, ಇಲ್ಲವಾದಲ್ಲಿ ನಮ್ಮ ಬಳಿ ಬನ್ನಿ ಎಂದು ಅವರು ಹೇಳಿದರು.
Advertisement
ಬೆಂಗಳೂರಿನಲ್ಲಿ ಅಂಡರ್ ವರ್ಲ್ಡ್ ಮಾಫಿಯಾ, ರಿಯಲ್ ಎಸ್ಟೇಟ್, ಪುಡಿ ರೌಡಿಗಳ ಉಪಟಳ ಹೆಚ್ಚಾಗಿದೆ. ಗುಂಪಿನಲ್ಲಿದ್ದರೆ ಮಾತ್ರ ಅವರು ರೌಡಿಗಳು, ಒಬ್ಬರೆ ಇದ್ದರೆ ಇವರು ಪುಕ್ಕಲರು. ಭೂಮಾಫಿಯಾ, ಗಾರ್ಬೆಜ್ ಮಾಫಿಯಾ, ಸಂಬಂಧ ವಿಲ್ಲದ ವಿಚಾರಗಳಿಗೆ ತಲೆಹಾಕುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Advertisement
ಟಾಟಾ ರಮೇಶ ನೀಡಿದ ದೂರಿನನ್ವಯ ಮಂಗಳವಾರ ಅಗ್ನಿ ಶ್ರೀಧರ್ ನಿವಾಸದ ಮೇಲೆ 150 ಕೂ ಹೆಚ್ಚು ಅಧಿಕಾರಿ ಹಾಗು ಸಿಬ್ಬಂದಿಯಿಂದ ದಾಳಿ ನಡೆಸಿದ್ದೆವು. ದಾಳಿ ನಡೆಸಿದ್ದ ಸಂದರ್ಭದಲ್ಲಿ ಅಕ್ರಮ ಶಸ್ತ್ರಸ್ತ್ರಗಳು ಪತ್ತೆಯಾಗಿವೆ. ಶ್ರೀಧರ್‍ಗೆ ಲಘು ಹೃದಯಘಾತವಾಗಿದ್ದು, ಪೊಲೀಸ್ ಭದ್ರತೆಯಲ್ಲಿ ಚಿಕಿತ್ಸೆ ನಡೆಸಲಾಗ್ತಿದೆ.
Advertisement
ಏಳು ಮಂದಿ ಆರೋಪಿಗಳ ಮೇಲೆ ಕುಮಾರಸ್ವಾಮಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ರೋಹಿತ್ ಅಲಿಯಾಸ್ ಒಂಟೆ ಮತ್ತು ಸೈಲೆಂಟ್ ಸುನಿಲನ್ನು ಟಾಟಾ ರಮೇಶ್ ಕೊಲೆ ಬೆದರಿಕೆ ಮೇಲೆ ವಿಚಾರಣೆ ನಡೆಸಲಾಗ್ತಿದೆ. ಕಬಡಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣದಲ್ಲಿ ಇವರು ಶಾಮೀಲಾಗಿರುವ ಶಂಕೆ ಇದ್ದು ವಿಚಾರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.