ಹ್ಯೂಸ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಜಂಟಿಯಾಗಿ ಭಾಗವಹಿಸುತ್ತಿರುವ ಹೌಡಿ ಮೋದಿ ಕಾರ್ಯಕ್ರಮಕ್ಕೆ ಹ್ಯೂಸ್ಟನ್ ಎನ್‍ಆರ್ ಜಿ ಕ್ರೀಡಾಂಗಣ ಸಿದ್ಧಗೊಂಡಿದೆ. ಕಾರ್ಯಕ್ರಮಕ್ಕೆ ಮುಂಚೆಯೇ ಅನಿವಾಸಿ ಭಾರತೀಯರು ಆಗಮಿಸುತ್ತಿದ್ದಾರೆ. ಕ್ರೀಡಾಂಗಣದ ಪ್ರವೇಶಕ್ಕಾಗಿ ಜನರು ಕಿಲೋ ಮೀಟರ್ ಗಟ್ಟಲೇ ಸರತಿ ಸಾಲಿನಲ್ಲಿ ನಿಂತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಎನ್‍ಆರ್ ಜಿ ಕ್ರೀಡಾಂಗಣದಲ್ಲಿ 50 ಸಾವಿರ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿಶ್ವದ ಗಮನ ಸೆಳೆದಿರುವ ಹೌಡಿ ಮೋದಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಆರಂಭದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ 30 ನಿಮಿಷ ಮಾತನಾಡಲಿದ್ದಾರೆ. ಮೋದಿಯವರ ಭಾಷಣ 9 ಗಂಟೆಗೆ ಆರಂಭವಾಗಲಿದೆ. ಈಗಾಗಲೇ ಅತಿಥಿಗಳು ಸೇರಿದಂತೆ ಅನಿವಾಸಿ ಭಾರತೀಯರು ಆಗಮಿಸಿದ್ದು, 7.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಅಮರಿಕ ಮತ್ತು ಭಾರತದ ನಡುವಿನ ವ್ಯವಹಾರಿಕ ಸಂಬಂಧದ ಬಗ್ಗೆ ಮೋದಿ ಮಾತನಾಡಲಿದ್ದಾರೆ ಎನ್ನಲಾಗಿದೆ.
Advertisement
#WATCH Drums being played at NRG stadium in Houston, Texas. PM Modi to speak at the venue later today. #HowdyModi pic.twitter.com/TwnmXHq2Av
— ANI (@ANI) September 22, 2019
Advertisement
ಅಮೆರಿಕಾದ ಹ್ಯೂಸ್ಟನ್ ನಗರ ಮೋದಿಮಯವಾಗಿದ್ದು, ಕಾರ್ಯಕ್ರಮಕ್ಕೆ ನಮ್ಮ ರಾಷ್ಟ್ರಗೀತೆ ಜನಗಣಮನದಿಂದ ಆರಂಭಗೊಳ್ಳಲಿದೆ. ಪಿಎಂ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಜೊತೆಯಾಗಿ ವಿಶೇಷ ಬಾಲಕನೊಬ್ಬ ರಾಷ್ಟ್ರಗೀತೆ ಹಾಡಲಿದ್ದಾನೆ. ಕಾರ್ಯಕ್ರಮಕ್ಕೆ ಇಂಡಿಯನ್ ಮುಸ್ಲಿಂ ಅಸೋಸಿಯೇಶನ್ ಸದಸ್ಯರು ಮೋದಿ ಸ್ವಾಗತಕ್ಕೆ ಕಾದು ಕುಳಿತಿದ್ದಾರೆ. ಹೌಡಿ ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿಗಳ ಭಾಷಣವನ್ನು ಮೂರು ಭಾಷೆಗಳಲ್ಲಿ ನೇರ ಪ್ರಸಾರಗೊಳ್ಳಲಿದೆ. ಹಿಂದಿ, ಇಂಗ್ಲಿಷ್ ಮತ್ತು ಸ್ಪ್ಯಾನಿಶ್ ಭಾಷೆಗಳಲ್ಲಿ ಕೇಳಬಹುದಾಗಿದೆ.
Advertisement
USA: People start gathering outside NRG stadium in Houston, Texas, to attend #HowdyModi event, say, ''We are excited to see Modi, expect to hear from him, & get words of wisdom from him because he is an inspiration for the country and people around the globe.'' pic.twitter.com/GH7zFOcLRG
— ANI (@ANI) September 22, 2019
Advertisement
ಏನಿದು ಹೌಡಿ ಮೋಡಿ ಕಾರ್ಯಕ್ರಮ?
ನೈಋತ್ಯ ಅಮೆರಿಕದಲ್ಲಿ ‘ಹೌ ಡು ಯು ಡು'(ನೀವು ಹೇಗಿದ್ದೀರಿ) ಎಂದು ಕೇಳಲು ಸಂಕ್ಷಿಪ್ತವಾಗಿ ‘ಹೌಡಿ’ ಎಂದು ಕರೆಯುತ್ತಾರೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ಹ್ಯೂಸ್ಟನ್ ನಗರದಲ್ಲಿರುವ ಭಾರತೀಯರು ‘ಹೌಡಿ ಮೋದಿ’ ಹೆಸರನ್ನಿಟ್ಟಿದ್ದಾರೆ.