ಮುಂಬೈ: ಮುಂಬೈನಲ್ಲಿರುವ ಮಸೀದಿಯೊಂದರ ಸ್ವಲ್ಪ ದೂರದಲ್ಲೇ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (MNS) ಕಾರ್ಯಕರ್ತರು ಹನುಮಾನ್ ಚಾಲೀಸಾ ಪಠಿಸಿದ್ದಾರೆ. ಇದರೊಂದಿಗೆ ಜೈ ಶ್ರೀರಾಮ್ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಾ… ಜೈ ಸೋ’ ಎಂಬ ಘೋಷಣೆಗಳನ್ನೂ ಕೂಗಿದ್ದು, ತೀವ್ರ ವಿವಾದಕ್ಕೆ ತಿರುಗಿದೆ.
Advertisement
ಎಂಎನ್‌ಎಸ್ ಮುಖ್ಯಸ್ಥ ರಾಜ್‌ಠಾಕ್ರೆ ನಿನ್ನೆ ತಮ್ಮ ಬೆಂಬಲಿಗರಿಗೆ ಹನುಮಾನ್ ಚಾಲೀಸಾ ಪಠಿಸುವಂತೆ ಕರೆ ನೀಡಿದ್ದರು. ಅದರಂತೆ ಹನುಮಾನ್ ಚಾಲೀಸಾ ಪಠಣ ಹಾಗೂ ಜೈ ಶ್ರೀರಾಮ್ ಘೋಷಣೆಗಳು ಮೊಳಗಿವೆ. ಬೆಳಿಗ್ಗೆ 5 ಗಂಟೆಯ ಆಜಾನ್ ಸಮಯದಲ್ಲಿ ಕಟ್ಟಡದ ಮೇಲಿಂದ ಧ್ವನಿವರ್ಧಕಗಳ ಮೂಲಕ ಹನುಮಾನ್ ಚಾಲೀಸಾ ಕೇಳುವಂತೆ ಮಾಡಿದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋಗಳು ಹರಿದಾಡುತ್ತಿರುವುದಾಗಿ ವರದಿಯಾಗಿದೆ.
Advertisement
Advertisement
ಎರಡು ದಿನಗಳ ಹಿಂದೆಯೇ ಮಹಾರಾಷ್ಟçದ ಔರಂಗಾಬಾದ್‌ನಲ್ಲಿ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ರಾಜ್ ಠಾಕ್ರೆ, ಡಬಲ್ ಪವರ್‌ನಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಔರಂಗಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಪ್ರತಿಯೊಬ್ಬರು ಪರಸ್ಪರ ಧರ್ಮವನ್ನು ಗೌರವಿಸಬೇಕು: ನಿತೀಶ್ ಕುಮಾರ್
Advertisement
ಪೊಲೀಸರಿಗೆ ತಲೆನೋವು: ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ತೆಗೆಯುವಂತೆ ಆಗ್ರಹಿಸಿದ್ದ ರಾಜ್ ಠಾಕ್ರೆ, ಅದಕ್ಕೆ ಮೇ 3 ಕೊನೆಯ ದಿನವೆಂದು ಗಡುವು ನೀಡಿದ್ದರು. ಅದು ಸಾಧ್ಯವಾಗದಿದ್ದರೆ, ಮಸೀದಿಗಳ ಎದುರೇ ಹನುಮಾನ್ ಚಾಲೀಸಾ ಪಠಣ ಆರಂಭಿಸುವುದಾಗಿ ಘೋಷಿಸಿದ್ದರು. ಅದರ ಬೆನ್ನಲ್ಲೇ ಮಹಾರಾಷ್ಟ್ರ ಪೊಲೀಸರು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಬಗ್ಗೆ ತಲೆಕಡೆಸಿಕೊಂಡಿದ್ದಾರೆ.
— Raj Thackeray (@RajThackeray) May 4, 2022
ಈ ನಡುವೆ ರಾಜ್ ಠಾಕ್ರೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ತಂದೆ ಬಾಳಾಸಾಹೇಬ್ ಠಾಕ್ರೆ ಅವರು ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ಒತ್ತಾಯಿಸಿದ್ದರ ಹಳೆಯ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬಂಧನದಲ್ಲಿರುವ ರಾಣಾ ದಂಪತಿ ನಿವಾಸದಲ್ಲಿ ಅಕ್ರಮ ಕಟ್ಟಡ – ಬಿಎಂಸಿ ನೋಟೀಸ್
36 ಸೆಕೆಂಡ್‌ಗಳ ಈ ವೀಡಿಯೋನಲ್ಲಿ ಬಾಳಾ ಠಾಕ್ರೆ, ಧ್ವನಿವರ್ಧಕಗಳ ಬಳಕೆ ವಿರುದ್ಧ ಎಚ್ಚರಿಕೆ ನೀಡಿರುವುದು ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ತಡೆಯಲಾಗುತ್ತದೆ ಎಂದಿದ್ದಾರೆ.
Maharashtra | Security tightens near Puneshswar Hanuman Temple at Kasba Peth area in Pune over MNS announcement of "Maha Arti" in the temple amid loudspeaker row pic.twitter.com/u7UGggsP9y
— ANI (@ANI) May 4, 2022
ಜಾಮೀನು ರಹಿತ ವಾರೆಂಟ್: 14 ವರ್ಷಗಳ ಹಿಂದಿನ ಪ್ರಕರಣದ ಸಂಬಂಧ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ನ್ಯಾಯಲಯವು ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮುಂಬೈ ಪೊಲೀಸರು ಅಪರಾಧ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಸಿಆರ್‌ಪಿಸಿ ಸೆಕ್ಷನ್ ಅಡಿಯಲ್ಲಿ ಠಾಕ್ರೆ ಹಾಗೂ ನೂರಾರು ಮಂದಿಗೆ ನೋಟಿಸ್ ನೀಡಿದ್ದಾರೆ. ಅದರ ಬೆನ್ನಲ್ಲೇ ರಾಜ್ ಠಾಕ್ರೆ ಅವರ ಮುಂಬೈ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.