ಮಾಸ್ಕೋ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (NSA Ajit Doval) ಮತ್ತು ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಗುರುವಾರ ಮಾಸ್ಕೋದಲ್ಲಿ (Moscow) ಭೇಟಿಯಾಗಿ ದ್ವಿಪಕ್ಷೀಯ ಚರ್ಚೆ ನಡೆಸಿದರು.
ಅಜಿತ್ ದೋವಲ್ ಅವರು ಅಧ್ಯಕ್ಷ ಪುಟಿನ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು ಎಂದು ರಾಯಭಾರ ಕಚೇರಿ ಟ್ವೀಟ್ ಮಾಡಿದೆ.
Advertisement
ಬುಧವಾರ ದೋವಲ್ ಅವರು ರಷ್ಯಾ ಆಯೋಜಿಸಿದ್ದ ಅಫ್ಘಾನಿಸ್ತಾನದ (Afghanistan) ಭದ್ರತಾ ಮಂಡಳಿಗಳು/ಎನ್‌ಎಸ್‌ಎಗಳ ಕಾರ್ಯದರ್ಶಿಗಳ ಐದನೇ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ದೋವಲ್ ಅವರು ಭಯೋತ್ಪಾದನೆಯನ್ನು ರಫ್ತು ಮಾಡಲು ಅಫ್ಘಾನ್ ಪ್ರದೇಶವನ್ನು ಬಳಸಲು ಯಾವುದೇ ದೇಶವನ್ನು ಅನುಮತಿಸಬಾರದು. ಅಗತ್ಯವಿರುವ ಸಮಯದಲ್ಲಿ ಭಾರತದ ಎಂದಿಗೂ ಅಫ್ಘಾನ್ ಜನರನ್ನು ಕೈಬಿಡುವುದಿಲ್ಲ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: 7 ಸಾವಿರ ಉದ್ಯೋಗಿಗಳನ್ನ ಕೆಲಸದಿಂದ ತೆಗೆಯಲು ಮುಂದಾದ The Walt Disney
Advertisement
Advertisement
ರಷ್ಯಾ ಮತ್ತು ಭಾರತವಲ್ಲದೆ, ಇರಾನ್, ಕಜಕಿಸ್ತಾನ್, ಕಿರ್ಗಿಸ್ತಾನ್, ಚೀನಾ, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Advertisement
ನವದೆಹಲಿಯಲ್ಲಿ ನಡೆಯಲಿರುವ ಜಿ-20 ವಿದೇಶಾಂಗ ಸಚಿವರ ಸಭೆಗೆ ವಾರಗಳ ಮುಂಚೆಯೇ ದೋವಲ್ ಮಾಸ್ಕೋಗೆ ಭೇಟಿ ನೀಡಿದ್ದಾರೆ. ಮಾರ್ಚ್ 1 ಮತ್ತು 2 ರಂದು ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
???????? NSA Ajit Doval called on HE President Putin. Wide-ranging discussion on bilateral and regional issues. Agreed to continue work towards implementing the India-Russia strategic partnership. pic.twitter.com/SMHe6VI9ve
— India in Russia (@IndEmbMoscow) February 9, 2023
ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ರಷ್ಯಾಕ್ಕೆ ಭೇಟಿ ನೀಡಿದ ಮೂರು ತಿಂಗಳ ನಂತರ ದೋವಲ್ ಭೇಟಿ ನೀಡಿದ್ದಾರೆ.
ಉಕ್ರೇನ್ ಮೇಲೆ ಯುದ್ಧ ಸಾರಿದ ಹೊರತಾಗಿಯೂ ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಗಟ್ಟಿಯಾಗಿ ಉಳಿದಿವೆ. ಪಾಶ್ಚಿಮಾತ್ಯ ದೇಶಗಳ ವಿರೋಧದ ನಡುವೆಯೂ ರಷ್ಯಾದ ಕಚ್ಚಾ ತೈಲದ ಆಮದು ಗಣನೀಯವಾಗಿ ಹೆಚ್ಚಾಗುತ್ತಿದೆ.
ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ಭಾರತ ಇನ್ನೂ ಖಂಡಿಸಿಲ್ಲ. ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ಭಾರತ ಆಗ್ರಹಿಸಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k