ಬೆಂಗಳೂರು: ರಾಷ್ಟ್ರೀಯ ಸೇವಾ ಯೋಜನೆಯ (NSS) ಮುಖ್ಯ ಉದ್ದೇಶವು ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸುವುದರ ಜೊತೆಗೆ ಸಹಿಷ್ಣುತೆ, ಸಹಭಾಗಿತ್ವ, ಸೇವೆ ಮತ್ತು ಸಹಾನುಭೂತಿ, ಸ್ವಾವಲಂಬನೆ ಮತ್ತು ದೇಶ ಪ್ರೇಮದ ಗುಣಗಳನ್ನು ಸಾರ್ವಜನಿಕ ಹಿತಾಸಕ್ತಿ ಮೈಗೂಡಿಸಿಕೊಳ್ಳುವಂತೆ ಮಾಡುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (thawar chand gehlot) ಅವರು ಹೇಳಿದರು.
ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಕೋಶ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯ ಎನ್‌ಎಸ್‌ಎಸ್ ಕೋಶ ವತಿಯಿಂದ ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಿದ್ದ 2020-21ನೇ ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆ: ಕಾಂಗ್ರೆಸ್ ಲೇವಡಿ
Advertisement
Advertisement
ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸರ್ಕಾರವು ʼಸಬ್ಕಾ ಸಾಥ್, ಸಬ್ಕಾ ವಿಕಾಸ್ʼ ಎಂಬ ಧ್ಯೇಯವಾಕ್ಯದೊಂದಿಗೆ ʼಏಕ್ ಭಾರತ್, ಶ್ರೇಷ್ಠ ಭಾರತʼ ಧ್ಯೇಯದಲ್ಲಿ ಕೆಲಸ ಮಾಡುತ್ತಿದೆ. ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಅಭಿವೃದ್ಧಿಪಡಿಸಲು ‘ಮೇಕ್ ಇನ್ ಇಂಡಿಯಾ’ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ‘ಡಿಜಿಟಲ್ ಇಂಡಿಯಾ’ ಉಪಕ್ರಮವು ಭಾರತವನ್ನು ಡಿಜಿಟಲ್ ಸಶಕ್ತ ಮತ್ತು ಚೇತರಿಸಿಕೊಳ್ಳುವ ಆರ್ಥಿಕತೆಯಾಗಿ ಪರಿವರ್ತಿಸಲು ಪ್ರಯತ್ನಿಸುತ್ತದೆ. ಸ್ವಚ್ಛ ಮತ್ತು ಹಸಿರು ಭಾರತವನ್ನು ನಿರ್ಮಿಸಲು ‘ಸ್ವಚ್ಛ ಭಾರತ ಮಿಷನ್’ ಆರಂಭಿಸಲಾಗಿದೆ. ಈ ಯೋಜನೆಗಳಿಗೆ ಎನ್‌ಎಸ್‌ಎಸ್ ಸ್ವಯಂಸೇವಕರು ಗಮನಾರ್ಹ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.
Advertisement
ಎನ್‌ಎಸ್‌ಎಸ್ ಭಾರತದಾದ್ಯಂತ 40 ಲಕ್ಷಕ್ಕೂ ಹೆಚ್ಚು ಸ್ವಯಂಸೇವಕರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಯುವ ಸ್ವಯಂಸೇವಾ ಸಂಸ್ಥೆಗಳಲ್ಲಿ ಒಂದಾಗಿದೆ. ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಎನ್ಎಸ್ಎಸ್ ಅನ್ನು ದೊಡ್ಡ ರೀತಿಯಲ್ಲಿ ವಿಸ್ತರಿಸಲು ಬದ್ಧವಾಗಿದೆ. ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸಮಾಜದ ಸೇವೆಯಲ್ಲಿ ಪಾಲ್ಗೊಂಡು, ಶಿಸ್ತು, ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ಸಂಕಷ್ಟದಲ್ಲಿರೋ ಜನರಿಗೆ ಸ್ಪಂದಿಸೋದು ಬಿಟ್ಟು ಡಾನ್ಸ್ ಮಾಡ್ತಿದ್ದಾರೆ : ಸಿದ್ದರಾಮಯ್ಯ ಕಿಡಿ
Advertisement
ಕರ್ನಾಟಕ ರಾಜ್ಯದಲ್ಲಿ ಸುಮಾರು 5 ಲಕ್ಷ ಎನ್‌ಎಸ್‌ಎಸ್ ಸ್ವಯಂಸೇವಕರು ಪ್ರಶಂಸನೀಯ ಕಾರ್ಯಗಳನ್ನು ಮಾಡಿದ್ದಾರೆ. ಎನ್‌ಎಸ್‌ಎಸ್ ಸ್ವಯಂಸೇವಕರು ಕರ್ನಾಟಕ ರಾಜ್ಯದ ಪ್ರಮುಖ ಯೋಜನೆಗಳು, ಶಿಕ್ಷಣ ಮತ್ತು ಸಾಕ್ಷರತೆ, ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಪೋಷಣೆ, ನೈರ್ಮಲ್ಯ, ಪರಿಸರ ಸಂರಕ್ಷಣೆ, ಸಮಾಜ ಸೇವಾ ಕಾರ್ಯಕ್ರಮಗಳು, ಮಹಿಳೆಯರ ಸ್ಥಿತಿ ಸುಧಾರಣೆ, ವಿಪತ್ತು ಪರಿಹಾರ ಮತ್ತು ಪುನರ್ವಸತಿ ಕಾರ್ಯಕ್ರಮಗಳಿಗೆ ಹಾಗೂ ಸಾಮಾಜಿಕ ಅನಿಷ್ಟಗಳು, ಹಿಂಸಾಚಾರ-ವಿರೋಧಿ, ಯೋಗ ಮುಂತಾದ ಪ್ರಮುಖ ಕಾರ್ಯಕ್ರಮಗಳ ಪ್ರಚಾರ ಮತ್ತು ಅನುಷ್ಠಾನದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಎನ್‌ಎಸ್‌ಎಸ್ ಸ್ವಯಂ ಸೇವಕರು COVID-19 ಸಾಂಕ್ರಾಮಿಕ ಸಮಯದಲ್ಲಿ ಕೊರೊನಾ ವಾರಿಯರ್ ಆಗಿ ಮಾಡಿದ ಕಾರ್ಯಕ್ಕಾಗಿ ಅಭಿನಂದಿಸಿದ ರಾಜ್ಯಪಾಲರು, ಕರ್ನಾಟಕ ರಾಜ್ಯವು 2019-20ನೇ ಸಾಲಿನ ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ. ಈ ಸಾಧನೆಗಳು ನಿಸ್ಸಂಶಯವಾಗಿ ಎನ್ಎಸ್ಎಸ್ ಚಟುವಟಿಕೆಗಳ ಅನುಷ್ಠಾನವನ್ನು ಪ್ರೋತ್ಸಾಹಿಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಚಿವ ಡಾ.ನಾರಾಯಣ ಗೌಡ, ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಲಿಂಗರಾಜು ಗಾಂಧಿ, ರಾಜ್ಯ ಎನ್‌ಎಸ್‌ಎಸ್ ಅಧಿಕಾರಿ ಪ್ರತಾಪ್ ಲಿಂಗ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.