ತುಮಕೂರು: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆ ಮೇಲೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ದಾಳಿ ನಡೆಸಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಇದನ್ನು ಖಂಡಿಸಿದ್ದಾರೆ.
Advertisement
ಇಂದು ತುಮಕೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವರು, ಬಿ.ಸಿನಾಗೇಶ್ ಮನೆ ಮೇಲೆ ಎನ್‍ಎಸ್‍ಯುಐಯವರು ದಾಂಧಲೆ ಮಾಡಿದ್ದಾರೆ. ಮನೆ ಬಳಿ ಬೆಂಕಿ ಹಚ್ಚುವ ಕೆಲಸ ಕೂಡ ಮಾಡಿದ್ದಾರೆ. ಇದು ಎನ್‍ಎಸ್‍ಯುಐ ಗೂಂಡಾ ವರ್ತನೆ. ಅದಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಕಿಡಿಕಾರಿದರು. ಇದನ್ನೂ ಓದಿ: ದೇಶದ ಒಳಿತಿಗಾಗಿ ಪ್ರಧಾನಿ ಸ್ಥಾನವನ್ನು ತ್ಯಾಗ ಮಾಡಿದವರಿಗೆ ಕೊಡುವ ಬೆಲೆ ಇದೆಯೇ?: ಕೇಂದ್ರ ಸರ್ಕಾರಕ್ಕೆ ಡಿಕೆಶಿ ಪ್ರಶ್ನೆ
Advertisement
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕುಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು.@BCNagesh_bjp
— Basavaraj S Bommai (@BSBommai) June 1, 2022
Advertisement
ಇಂತಹ ವರ್ತನೆ ಇನ್ನು ಮುಂದೆ ನಡೆಯಬಾರದು. ಬೆಂಗಳೂರಿನಿಂದ 5 ಜನ, ಭದ್ರಾವತಿಯಿಂದ ಒಬ್ಬ, ಚಿಕ್ಜಮಕಗಳೂರು, ದಾವಣಗೆರೆಯಿಂದ ತಲಾ ಇಬ್ಬರು ಬಂದಿದ್ದಾರೆ. ಈ ಮೂಲಕ ಇದು ಪೂರ್ವ ನಿಯೋಜಿತ ಕೃತ್ಯ. ಘಟನೆಗೆ ಸಂಬಂಧಿಸಿದಂತೆ ಒಟ್ಟು 15 ಜನರನ್ನು ಬಂಧಿಸಲಾಗಿದೆ ಎಂದು ಸಚಿವರು ತಿಳಿಸಿದರು.