ನವದೆಹಲಿ: ಉಕ್ರೇನ್‌ನೊಂದಿಗಿನ (Ukraine) ಸಂಘರ್ಷವನ್ನು ಮಾತುಕತೆ ಹಾಗೂ ರಾಜತಾಂತ್ರಿಕತೆಯ ಮೂಲಕ ಬಗೆಹರಿಸಬೇಕು. ಆದರೆ ಅಣ್ವಸ್ತ್ರವನ್ನು (Nuclear Weapons) ಯಾರು ಕೂಡಾ ಆಶ್ರಯಿಸಬಾರದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ರಷ್ಯಾದ (Russia) ಸಹವರ್ತಿ ಸರ್ಗೆಯ್ ಶೋಯಿಗು (Sergei Shoigu) ಅವರಿಗೆ ಸಲಹೆ ನೀಡಿದ್ದಾರೆ.
ಬುಧವಾರ ದೂರವಾಣಿ ಮೂಲಕ ಉಭಯ ರಾಷ್ಟ್ರಗಳ ರಕ್ಷಣಾ ಸಚಿವರು ಮಾತುಕತೆ ನಡೆಸಿದ್ದಾರೆ. ಈ ವೇಳೆ ಶೋಯಿಗು ಅವರು ಉಕ್ರೇನ್‌ನಲ್ಲಿ ನಡೆಸುತ್ತಿರುವ ತಮ್ಮ ಕಾರ್ಯಾಚರಣೆಯ ಬಗ್ಗೆ ಸಿಂಗ್‌ಗೆ ವಿವರಿಸಿದ್ದಾರೆ. ಈ ವೇಳೆ ರಾಜನಾಥ್ ಸಿಂಗ್ ಯುದ್ಧವನ್ನು ಮಾತುಕತೆ ಮೂಲಕ ಬಗೆಹರಿಸುವಂತೆ ಸಲಹೆ ನೀಡಿರುವುದಾಗಿ ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.
Advertisement
Advertisement
ಮಾತುಕತೆಯ ವೇಳೆ ರಾಜನಾಥ್ ಸಿಂಗ್ ಅಣ್ವಸ್ತ್ರ ಬಳಕೆಯಿಂದ ಮುಂದಾಗಬಹುದಾದಂತಹ ಅಪಾಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಘರ್ಷಣೆಯ ಪರಿಹಾರಕ್ಕೆ ಮಾತುಕತೆ ಹಾಗೂ ರಾಜತಾಂತ್ರಿಕತೆಯ ಹಾದಿಯನ್ನು ಅನುಸರಿಸುವ ಅಗತ್ಯತೆಯನ್ನು ಸಿಂಗ್ ಪುನರುಚ್ಚರಿಸಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
Advertisement
ಪರಮಾಣು ಅಥವಾ ರೇಡಿಯೊಲಾಜಿಕಲ್ ಶಸ್ತ್ರಾಸ್ತ್ರಗಳ ಬಳಕೆ ಮಾನವೀಯತೆಯ ಮೂಲ ತತ್ವಗಳಿಗೆ ವಿರುದ್ಧವಾಗಿದೆ. ಹೀಗಾಗಿ ಪರಮಾಣು ಆಯ್ಕೆಯನ್ನು ಯಾವೊಬ್ಬ ದೇಶವೂ ಆಶ್ರಯಿಸಬಾರದು ಎಂದು ರಾಜನಾಥ್ ಸಿಂಗ್ ಸೂಚಿಸಿದ್ದಾರೆ. ಇದನ್ನೂ ಓದಿ: T20 ವಿಶ್ವಕಪ್‍ನಲ್ಲಿ ಅಂಪೈರಿಂಗ್ ಮಾಡಿದ ಫುಟ್‍ಬಾಲ್ ದಿಗ್ಗಜ ಮೆಸ್ಸಿ! – ಫೋಟೋ ವೈರಲ್
Advertisement
ತೀವ್ರ ಸ್ಥಿತಿಗೆ ಯುದ್ಧ:
ಕಳೆದ 2 ವಾರಗಳ ಹಿಂದೆ ಕ್ರೈಮಿಯಾದಲ್ಲಿ ಸಂಭವಿಸಿದ ಭಾರೀ ಸ್ಫೋಟಕ್ಕೆ ಪ್ರತಿಕ್ರಿಯೆಯಾಗಿ ರಷ್ಯಾ ಉಕ್ರೇನ್‌ನ ವಿವಿಧ ನಗರಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಈ ಪ್ರತೀಕಾರದ ದಾಳಿ ಯುದ್ಧದ ತೀವ್ರತೆಯನ್ನು ಹೆಚ್ಚಿಸಿದೆ.
ಯುದ್ಧ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ಪ್ರಜೆಗಳು ಹಾಗೂ ವಿದ್ಯಾರ್ಥಿಗಳನ್ನು ತಕ್ಷಣವೇ ಉಕ್ರೇನ್ ತೊರೆಯುವಂತೆ ಕೇಳಿಕೊಂಡಿದೆ. ಇದನ್ನೂ ಓದಿ: ಎಂಇಎಸ್‍ನಿಂದ ಮತ್ತೆ ಗಡಿ ಖ್ಯಾತೆ – ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ ಸಿದ್ಧತೆ