ಆಮ್ಸ್ಟರ್ಡ್ಯಾಮ್: ಇಸ್ಲಾಂ ವಿರೋಧಿ ನಿಲುವುಗಳಿಗೆ ಹೆಸರುವಾಸಿಯಾಗಿದ್ದ ಡಚ್ ಬಲಪಂಥೀಯ ನಾಯಕ ಗೀರ್ಟ್ ವೈಲ್ಡರ್ಸ್ (Geert Wilders) ಅವರು ನೆದರ್ಲೆಂಡ್ಸ್ (Netherlands) ಸಂಸತ್ತಿನ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದಾರೆ.
ಚುನಾವಣೆಯಲ್ಲಿ ಗೆದ್ದಿರುವ ಹಿನ್ನೆಲೆ ಗೀರ್ಟ್ ವೈಲ್ಡರ್ಸ್ ನೆದರ್ಲೆಂಡ್ಸ್‌ನ ನೂತನ ಪ್ರಧಾನಿಯಾಗಿ (PM) ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ.
ಈ ಹಿಂದೆ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕವಾದ ಹೇಳಿಕೆಗಳನ್ನು ನೀಡಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ (Nupur Sharma) ಅವರನ್ನು ವೈಲ್ಡರ್ಸ್ ಬೆಂಬಲಿಸಿದ್ದರು. ಇದೀಗ ಬಲಪಂಥೀಯ, ಇಸ್ಲಾಂ ವಿರೋಧಿ ಜನಪರವಾದಿ ಗೀರ್ಟ್ ವೈಲ್ಡರ್ಸ್ ಅವರು ವಿಶ್ವ ಸಮರ 2ರ ನಂತರ ಡಚ್ ರಾಜಕೀಯದಲ್ಲಿ ದೊಡ್ಡ ಅಲೆ ಎಬ್ಬಿಸಿದ್ದಾರೆ. ದೇಶದ ಮೊದಲ ಬಲಪಂಥೀಯ ಪ್ರಧಾನಿಯಾಗಲು ಮುಂದಾಗಿದ್ದಾರೆ. ಇದನ್ನೂ ಓದಿ: ಇಂದಿನಿಂದ ಭಾರತ-ಆಸೀಸ್ T20 ಸರಣಿ – ODI ನಲ್ಲಿ ಫ್ಲಾಪ್ ಆದ್ರೂ T20ಯಲ್ಲಿ ಅಬ್ಬರಿಸ್ತಾರಾ ಸೂರ್ಯ?
ರಾಷ್ಟ್ರೀಯ ಬ್ರಾಡ್‌ಕಾಸ್ಟರ್ ಎನ್‌ಒಎಸ್ ಪ್ರಕಟಿಸಿರುವ ಸಮೀಕ್ಷೆಯಲ್ಲಿ ಸಂಸತ್ತಿನ ಕೆಳಮನೆಯ 150 ಸ್ಥಾನಗಳಲ್ಲಿ ವೈಲ್ಡರ್ಸ್ ಪಾರ್ಟಿ ಫಾರ್ ಫ್ರೀಡಮ್ 35 ಸ್ಥಾನಗಳನ್ನು ಗೆದ್ದಿದೆ ಎಂದು ಹೇಳಿದೆ. ಇದು ಕಳೆದ ಚುನಾವಣೆಯಲ್ಲಿ ಅವರು ಗೆದ್ದ ಸ್ಥಾನಗಳಿಗಿಂತ ಎರಡು ಪಟ್ಟು ಹೆಚ್ಚಾಗಿದೆ. ಇದನ್ನೂ ಓದಿ: ಉಗ್ರರ ವಿರುದ್ಧ ಎನ್‌ಕೌಂಟರ್ – ಕರ್ನಾಟಕ ಮೂಲದ ಕ್ಯಾಪ್ಟನ್ ಸೇರಿ ನಾಲ್ವರು ಯೋಧರು ಹುತಾತ್ಮ