ನವದೆಹಲಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾರ ವಿವಾದಾತ್ಮಕ ಹೇಳಿಕೆಯಿಂದಾಗಿ ಕೋಮು ಉದ್ವಿಗ್ನತೆ ಸೃಷ್ಟಿಯಾಗಿದೆ. ಇದರಿಂದಾಗಿ ಉದಯಪುರ, ಅಮರಾವತಿ ಹತ್ಯೆಯ ನಂತರ ಬಂದ ಹೇಳಿಕೆಗಳು ಕೋಮು ಉದ್ವಿಗ್ನತೆ ಸೃಷ್ಟಿಸಿ ಮತ ಪಡೆಯುವ ಉದ್ದೇಶ ಹೊಂದಿವೆ. ಈ ಎಲ್ಲ ಕೋಮು ಗಲಭೆಗಳು ಸೃಷ್ಟಿಸಿದ್ದೂ ಮತ ಪಡೆಯುವ ಉದ್ದೇಶದಿಂದಲೇ ಎಂದು ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಿರುವ ಪ್ರತಿ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ವಾಗ್ದಾಳಿ ನಡೆಸಿದ್ದಾರೆ.
आज गुजरात में कांग्रेस पार्टी के सांसदों, विधायकों के साथ बेहतरीन बातचीत रही। साथ ही मीडिया के साथियों को भी संबोधित किया।
महात्मा गांधी और सरदार पटेल की इस पावन धरती से मिले अभूतपूर्व समर्थन ने लोकतंत्र को बचाने की हमारी लड़ाई को और मज़बूत किया है। pic.twitter.com/lIwNT5zkH5
— Yashwant Sinha (@YashwantSinha) July 8, 2022
Advertisement
ರಾಷ್ಟ್ರಪತಿ ಚುನಾವಣೆಗೂ ಮುನ್ನ ಯಶವಂತ್ ಸಿನ್ಹಾ ಗುಜರಾತ್‌ನ ವಿಧಾನಸೌಧಕ್ಕೆ ಭೇಟಿ ನೀಡಿ ಕಾಂಗ್ರೆಸ್ ಮತ್ತು ಇತರ ಪಕ್ಷದ ನಾಯಕರ ಜೊತೆ ಸಭೆ ನಡೆಸಿದರು. ಬಳಿಕ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಹೇಳಿಕೆ ವಿವಾದ, ಉದಯಪುರ ಹತ್ಯೆ ಹಾಗೂ ಅಮರಾವತಿ ವೈದ್ಯನ ಹತ್ಯೆಗಳ ಕುರಿತಾಗಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: `ಪವಿತ್ರ’ಪ್ರೇಮ ವಿಫಲ – ಯುವಕ ಕೈಕೊಟ್ಟನೆಂದು ಕಾಲೇಜಿನಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು
Advertisement
Advertisement
ದೇಶದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಇದು ಯೋಜಿತ ಪಿತೂರಿಯಾಗಿದೆ. ಕೇವಲ ಮತಕ್ಕಾಗಿ ಕಾನೂನು ಸುವ್ಯವಸ್ಥೆ ಸೃಷ್ಟಿಸುವ ಷಡ್ಯಂತ್ರವಿದೆ. ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್‌ನಲ್ಲಿ ಮಾತನಾಡುತ್ತಾರೆ. ಇಂತಹ ದೊಡ್ಡ ಘಟನೆಗಳು ಉದಯಪುರ, ಅಮರಾವತಿಯಲ್ಲಿ ನಡೆದಿವೆ. ಈವರೆಗೂ ಕೇಂದ್ರ ಸರ್ಕಾರದಿಂದ ಒಂದೇ ಒಂದು ಹೇಳಿಕೆಯನ್ನೂ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವರು ಅಥವಾ ರಕ್ಷಣಾ ಸಚಿವರು ಇಲ್ಲಿವರೆಗೆ ಯಾರೂ ಏನನ್ನೂ ಕೇಳಿಲ್ಲ. ಗುಜರಾತ್‌ನಲ್ಲಿ ಯಾವಾಗಲೂ ಸೆಕ್ಷನ್ 144 ಅಂತಹ ಪರಿಸ್ಥಿತಿ ಏಕೆ ಇದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲೂ ಇಂದಿನ ಸ್ಥಿತಿ ಇರಲಿಲ್ಲ ಎಂದು ವಿಷಾದಿಸಿದರು. ಇದನ್ನೂ ಓದಿ: ಫಸ್ಟ್ ನೈಟ್ ಅನ್ನೋದೇ ಇಲ್ಲ ಎಂದು ಹೇಳಿ ಪತಿಯನ್ನೇ ಬೆಚ್ಚಿ ಬೀಳಿಸಿದ ನಟಿ ಆಲಿಯಾ ಭಟ್
ಇದೇ ವೇಳೆ ರಾಷ್ಟ್ರಪತಿ ಚುನಾವಣೆ ಕುರಿತು ಮಾತನಾಡಿದ ಸಿನ್ಹಾ, ಅಧ್ಯಕ್ಷೀಯ ಚುನಾವಣೆ ಬಹಳ ಮುಖ್ಯ. ರಬ್ಬರ್ ಸ್ಟಾಂಪ್ ಅಧ್ಯಕ್ಷರು ಅಲ್ಲಿ ಕುಳಿತರೆ ಏನೂ ಬದಲಾಗುವುದಿಲ್ಲ. ಈ ಚುನಾವಣೆಯಲ್ಲಿ ನಾವು ಯಾವ ಜಾತಿಯಿಂದ ಬಂದವರು ಎಂಬುದು ಮುಖ್ಯವಲ್ಲ. ಯಾವ ಸಿದ್ಧಾಂತ ಪ್ರತಿನಿಧಿಸುತ್ತೇವೆ ಎಂಬುದು ಮುಖ್ಯ ಎಂದು ಹೇಳಿದರು.