ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ಗಲ್ಲಿಗೇರಿಸಿದ್ದ ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಮೂವರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದೇಶಪಾಂಡೆ ಗಲ್ಲಿಯ ಮೊಹ್ಮದ್ ಶೋಯೆಬ್ ಅಬ್ದುಲ್ ಗಫರ್ ಹಕೀಮ್, ಅಮನ್ ಮೊಕಾಶಿ ಹಾಗೂ ಅರ್ಬಾಜ್ ಮೊಕಾಶಿ ವಶಕ್ಕೆ ಪಡೆಯಲಾದ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನೂಪುರ್ ಶರ್ಮಾ ಪ್ರತಿಕೃತಿ ಮಾಡಿ ನೇಣು ಹಾಕಿದ ಕಿಡಿಗೇಡಿಗಳು
ದೇಶಪಾಂಡೆ ಗಲ್ಲಿಯ ಕಾಂಪ್ಲೆಕ್ಸ್ಗೆ ನುಗ್ಗಿ ಹಗ್ಗ ಕಟ್ಟಿ ನೂಪುರ್ ಶರ್ಮಾ ಪ್ರತಿಕೃತಿ ನೇತು ಹಾಕಲಾಗಿತ್ತು. ಕಾಂಪ್ಲೆಕ್ಸ್ ಒಳಗೆ ನುಗ್ಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂನ್ 9ರ ರಾತ್ರಿ 10.54ಕ್ಕೆ ಕಾಂಪ್ಲೆಕ್ಸ್ಗೆ ನುಗ್ಗಿ ಮಧ್ಯರಾತ್ರಿ ವೇಳೆ ಹಗ್ಗ ಕಟ್ಟಿ ಪ್ರತಿಕೃತಿ ನೇತು ಹಾಕಿದ್ದರು. ಕ್ಯಾಮೆರಾದ ದೃಶ್ಯಾವಳಿಗಳು ಹಾಗೂ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಗೆ ಆಯ್ಕೆ ಹಿನ್ನೆಲೆ ಮಂತ್ರಾಲಯ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ