ಧಾರವಾಡ: ಸರ್ಕಾರಿ ಆಸ್ಪತ್ರೆಯಲ್ಲೇ ಶುಶ್ರುಕಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ಕಮಲಾ ನಾಗೇಶ್ವರರಾವ್ ಎಂಬವರೇ ಆತ್ಮಹತ್ಯೆಗೆ ಯತ್ನಿಸಿದ ಶುಶ್ರುಕಿ. ಹಿರಿಯ ಆರೋಗ್ಯ ಶುಶ್ರುಕಿ ಆಗಿರುವ ಕಮಲಾ, ಆಸ್ಪತ್ರೆ ಕೊಠಡಿಯಲ್ಲೇ ನೇಣು ಬಿಗಿದುಕೊಳ್ಳಲು ಯತ್ನಿಸಿದ್ರು. ಈ ವೇಳೆ ಪಕ್ಕದಲ್ಲೇ ಇದ್ದ ಇತರೆ ಸಿಬ್ಬಂದಿಗಳು ಕಮಲಾರನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಕಾಡಾನೆಗಳನ್ನು ಸ್ಥಳಾಂತರಿಸಿ, ಇಲ್ಲವೇ ನಮ್ಮನ್ನೇ ಸ್ಥಳಾಂತರಿಸಿ- ಸರ್ಕಾರಕ್ಕೆ ಮಲೆನಾಡಿಗರ ಆಗ್ರಹ
ಆತ್ಮಹತ್ಯೆಗೆ ಮೇಲಾಧಿಕಾರಿಗಳ ಕಿರುಕುಳವೇ ಕಾರಣ. ಇವರ ಕಿರುಕುಳಗಳಿಂದ ಬೇಸತ್ತು ಆತ್ಮಹತ್ಯೆಗೆ ಮಾಡಿಕೊಳ್ಳಬೇಕು ಎಂದು ತೀರ್ಮಾನಿಸಿದೆ ಎಂದು ಶುಶ್ರುಕಿ ಕಮಲಾ ಆರೋಪಿಸಿದ್ದಾರೆ. ಇದನ್ನೂ ಓದಿ: ಇಂದು ಮಧ್ಯಾಹ್ನ ಬೆಂಗಳೂರಿಗೆ ಬರಲಿದ್ದಾರೆ ರಾಹುಲ್ ಗಾಂಧಿ
ಕೊರೊನಾ ವೇಳೆಯಿಂದ ಉತ್ತಮ ಕೆಲಸ ಮಾಡಿಕೊಂಡು ಬಂದಿದ್ದೇನೆ. ಆದರು ಕಿರುಕುಳ ಮಾತ್ರ ತಪ್ಪಿಲ್ಲ. ಸಾಕಷ್ಟು ನೋವುಗಳನ್ನು ಸಹಿಸಿಕೊಂಡು ಕೆಲಸ ಮಾಡುತ್ತಿದ್ದೇನೆ. ನನ್ನ ಆತ್ಮಹತ್ಯೆಗೆ ಮೇಲಾಧಿಕಾರಿ (ಡಿಎಚ್‍ಒ) ಜಿಲ್ಲಾ ಆರೋಗ್ಯಧಿಕಾರಿ ಯಶವಂತ ಮದಿನಕರ ಕಾರಣ ಎಂದು ಆರೋಪ ಮಾಡಿದ್ದಾರೆ.