ಬೆಂಗಳೂರು/ನೆಲಮಂಗಲ: ಪಟ್ಟಣದ ಥಾಮಸ್ ಮೆಮೋರಿಯಲ್ ಆಂಗ್ಲ ಶಾಲಾವತಿಯಿಂದ ನರ್ಸರಿ ವಿಭಾಗದ ಶಾಲಾ ವಾರ್ಷಿಕೋತ್ಸವ ಹಾಗೂ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ವಾರ್ಷಿಕ ಕ್ರೀಡೋತ್ಸವದ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಪಟ್ಟಣದ ಗೋಪಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು.
Advertisement
ಶಾಲೆಯ ನೂರಾರು ಮಕ್ಕಳು ಹಾಗೂ ಮಕ್ಕಳ ಪೋಷಕರು ಶಾಲಾ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
Advertisement
Advertisement
ಶಾಲಾ ಸಂಸ್ಥಾಪಕ ಅಧ್ಯಕ್ಷೆ ಜೋಸ್ನಾ ಫ್ರಾನ್ಸಿಸ್ ಆ್ಯಂಟನಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ನರ್ಸರಿ ವಿಭಾಗದ ಶಾಲಾ ವಾರ್ಷಿಕೋತ್ಸವ ಹಾಗೂ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಮ್ಮ ಶಾಲೆ ವತಿಯಿಂದ ಹಮ್ಮಿಕೊಂಡಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ. ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಉತ್ತಮ ಸಮಾಜದ ಜೊತೆಗೆ ಪಾಠ-ಪ್ರವಚನಗಳು, ವಿವಿಧ ಕಾರ್ಯಕ್ರಮಗಳು, ಕ್ರೀಡೆಗಳು, ಉತ್ತಮ ವಾತಾವರಣ ಸಹಕಾರಿಯಾಗುತ್ತಿದೆ. ಸಮಾಜಕ್ಕೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ನಮ್ಮ ಶಾಲಾ ಸಂಸ್ಥೆಯ ಗುರಿ ಎಂಬುದಾಗಿ ಅಭಿಪ್ರಾಯಪಟ್ಟರು.
Advertisement
ಕಾರ್ಯಕ್ರಮದಲ್ಲಿ ಶಾಲಾ ಸಂಸ್ಥಾಪಕ ಅಧ್ಯಕ್ಷರು ಜೋಸ್ನಾ ಫ್ರಾನ್ಸಿಸ್ ಆ್ಯಂಟನಿ, ಉಪಾಧ್ಯಕ್ಷ ಡೇವಿಡ್ ಸಿಮೋನ್, ಖಜಾಂಚಿ ಚೆಲ್ಲಾ, ಪ್ರಾಂಶುಪಾಲೆ ರತಿ ಏಂಜೆಲ್, ಆಡಳಿತಾಧಿಕಾರಿ ವಿನೋದ್, ಸಂಯೋಜಕಿ ಪೂರ್ಣಿಮಾ, ಕನ್ನಡ ಪ್ರಾಧ್ಯಾಪಕ ಹರ್ಷವರ್ಧನ್ ಸೇರಿದಂತೆ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.