ತುಮಕೂರು: ಓಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಕೇರಳದಿಂದ ಬಂದ 15 ನರ್ಸಿಂಗ್ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಗಂಗಾ 7 ವಿದ್ಯಾರ್ಥಿಗಳಿಗೆ ಹಾಗೂ ವರದರಾಜ್ ನರ್ಸಿಂಗ್ ಕಾಲೇಜು 8 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ನಗರದಲ್ಲಿ ಒಟ್ಟು 15 ವಿದ್ಯಾರ್ಥಿಗಳಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇವರೆಲ್ಲರೂ ಕೇರಳದಿಂದ ಬಂದ ವಿದ್ಯಾರ್ಥಿಗಳಾಗಿದ್ದಾರೆ. ಆದ್ದರಿಂದ ಕೇರಳದ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದರು.
Advertisement
Advertisement
Advertisement
ಕೇರಳದ ವಿದ್ಯಾರ್ಥಿಗಳು ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜಿನ ಎಲ್ಲಾ 180 ವಿದ್ಯಾರ್ಥಿಗಳಿಗೂ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಓಮಿಕ್ರಾನ್ ಪರೀಕ್ಷೆಗಾಗಿ ಲ್ಯಾಬ್‍ಗೆ ಸ್ವಾಬ್ ಮಾದರಿ ರವಾನೆ ಮಾಡಲಾಗಿದೆ.ಇದನ್ನೂ ಓದಿ: ನಾಳೆಯಿಂದ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಅನುಮತಿ- ವೀಕ್‍ಡೇಸ್‍ನಲ್ಲಿ ಅವಕಾಶ, ವೀಕೆಂಡ್‍ನಲ್ಲಿ ನಿರ್ಬಂಧ
Advertisement
ಇದೇ ವೇಳೆ 15 ವಿದ್ಯಾರ್ಥಿಗಳ ಸ್ವಾಬ್‍ನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. 18 ವರ್ಷ ಮತ್ತು ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಕನಿಷ್ಟ ಒಂದು ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಮಾತ್ರ ತರಗತಿ ಅವಕಾಶ ನೀಡಲಾಗಿದೆ. ಲಸಿಕೆ ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ನಿರ್ಬಂಧ ಹೇರಲಾಗಿದೆ. ಈ ಕುರಿತು ಎಲ್ಲಾ ಕಾಲೇಜುಗಳಿಗೆ ಆದೇಶ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕೇಂದ್ರ ತೆಗೆದುಕೊಳ್ಳೋ ತೀರ್ಮಾನದ ಮೇಲೆ ಬೂಸ್ಟರ್ ಡೋಸ್ ನೀಡೋ ಬಗ್ಗೆ ತೀರ್ಮಾನ: ಸುಧಾಕರ್