ಬಾಣಂತಿಯರ ಸರಣಿ ಸಾವು ಕೇಸ್ – ಬಳ್ಳಾರಿ ಜಿಲ್ಲಾಸ್ಪತ್ರೆ ಮೇಲೆ ‘ಲೋಕಾ’ ದಾಳಿ

Public TV
1 Min Read
Bellary hospital lokayukta raid

ಬಳ್ಳಾರಿ: ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ (Bellary District Hospital) ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಮೂರು ಪ್ರತ್ಯೇಕ ತಂಡವಾಗಿ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್, ಬಿಮ್ಸ್ ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆ ಆವರಣದ ವೆರ್ ಹೌಸ್‌ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆದಿದೆ. ಇದನ್ನೂ ಓದಿ: ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂ.1 ಆಗಿದೆ – ಆರ್‌. ಅಶೋಕ್

ಬಳ್ಳಾರಿ ಜಿಲ್ಲಾಸ್ಪತ್ರೆಯ ಔಷಧ ವಿಭಾಗದಲ್ಲಿ ಲೋಕಾಯುಕ್ತ ಪರಿಶೀಲನೆ ಮಾಡಿದೆ. ಐವಿ ಹಾಗೂ ಆರ್‌ಎಲ್ ಫ್ಲೂಯಿಡ್ ಔಷಧಿ ಬಂದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಐವಿ ದ್ರಾವಣ ಹಾಗೂ ಬಾಣಂತಿಯರ ಅಸ್ವಸ್ಥ ಆದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ರಿಯಾಕ್ಷನ್ ಆಗಿರುವ ಗ್ಲುಕೋಸ್, ಸೀಜ್ ಆಗಿರುವ 280 ಐವಿ ಫ್ಲೂಯಿಡ್ ಆರ್‌ಎಲ್ ಬಾಟಲ್ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: ಬಾಣಂತಿಯರ ಸಾವು ಕೇಸ್ – ಪ್ರಕರಣದಲ್ಲಿ ನನ್ನ ತಪ್ಪಿದ್ರೆ ರಾಜೀನಾಮೆ ಕೊಡಲು ಸಿದ್ಧ: ದಿನೇಶ್ ಗುಂಡೂರಾವ್

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಸೂಚನೆ ನೀಡಿದ್ದಾರೆ.

Share This Article