ಮಂಗಳೂರು: ಹೃದಯಾಘಾತಕ್ಕೀಡಾಗಿ ನರ್ಸಿಂಗ್ ವಿದ್ಯಾರ್ಥಿನಿ (Nursing Student) ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಸುಮಾ(19) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ (Mangaluru) ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಸುಮಾ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದಳು. ಇದನ್ನೂ ಓದಿ: 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ – ಶಾಸಕ ಯತ್ನಾಳ್ ಭವಿಷ್ಯ
ಆಗಸ್ಟ್ 9 ರಂದು ಅನಾರೋಗ್ಯದ ಕಾರಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಳು. ಬಳಿಕ ಆ.11ರಂದು ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖಳಾಗಿದ್ದಳು. ಇದನ್ನೂ ಓದಿ: ಭಾನುವಾರ ರಾತ್ರಿ ಗೆಹ್ಲೋಟ್ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್
ಆದರೆ ಆ.13 ರಂದು ಸಂಜೆ ಮತ್ತೆ ಆಕೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಲೋ ಬಿಪಿಯಾಗಿ (Low BP) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]