ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು (Nursing student) ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಾಲಹಳ್ಳಿಯಲ್ಲಿ (Jalahalli) ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲ್ ಎಂದು ಗುರುತಿಸಲಾಗಿದೆ. ಮೃತ ಯುವತಿ ನಗರದ ನರ್ಸಿಂಗ್ ಕಾಲೇಜ್ ಒಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಮೂರು ದಿನಗಳ ಹಿಂದೆ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲಿಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಮೊಬೈಲ್‍ನಲ್ಲಿ ಮಾತಾಡ್ತಿದ್ದಾಗ ದಾಳಿ- ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ
ಕೌಟುಂಬಿಕ ಕಲಹದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ (Jalahalli Police) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಸ್ ಪಲ್ಟಿಯಾಗಿ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ