ಕೋಲ್ಕತ್ತಾ: ಬೆಂಗಾಲಿ ನಟಿ ಹಾಗೂ ಟಿಎಂಸಿ ಸಂಸದೆ ನುಸ್ರತ್ ಜಹಾನ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಆಗಸ್ಟ್ 25ರ ರಾತ್ರಿ ಕೋಲ್ಕತ್ತಾದ ನಿಯೀಟಿಯಾ ಆಸ್ಪತ್ರೆಗೆ ದಾಖಲಾಗಿದ್ದ ನುಸ್ರತ್ ಜಹಾನ್, ಗುರುವಾರ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. ಸದ್ಯದ ವರದಿ ಪ್ರಕಾರ ತಾಯಿ ಮತ್ತು ಮಗು ಇಬ್ಬರು ಕ್ಷೇಮವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ನಟ ಯ್ ದಾಸ್ ಗುಪ್ತಾ ನುಸ್ರತ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ನಿನ್ನೆ ನುಸ್ರಾತ್‍ರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ಮುನ್ನ ನುಸ್ರತ್ ಆಗಸ್ಟ್ 25ರಂದು ತಪಾಸಣೆಗಾಗಿ ಕೋಲ್ಕತ್ತಾದ ಪಾರ್ಕ್ ಸ್ಟ್ರೀಟ್ ಪ್ರದೇಶದ ಆಸ್ಪತ್ರೆಗೆ ಭೇಟಿ ನೀಡಿದ್ದರು. ಇದೀಗ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ನುಸ್ರತ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಲ್ಲದೇ ಇಂದು ಮುಂಜಾನೆ ನುಜ್ರತ್ ಜಹಾನ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದು, ಭಯಕ್ಕಿಂತ ನಂಬಿಕೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದರು. ಇದನ್ನೂ ಓದಿ:ಖ್ಯಾತ ತಬಲ ವಾದ್ಯಕಾರ ಪಂಡಿತ್ ಸುಭಂಕರ್ ಬ್ಯಾನರ್ಜಿ ಕೊರೊನಾಗೆ ಬಲಿ
View this post on Instagram
ನುಸ್ರತ್ ಮತ್ತು ಉದ್ಯಮಿ ನಿಖಿಲ್ ಜೈನ್ 2019ರಲ್ಲಿ ಟರ್ಕಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆ ಬಳಿಕ ಕೆಲ ಕಾರಣಗಳಿಂದ ಇವರಿಬ್ಬರ ನಡುವೆ ಪರಸ್ಪರ ಬಿರುಕು ಮೂಡಿ ಬೇರೆ ಬೇರೆಯಾಗಿದ್ದರು ಎಂಬ ಸುದ್ದಿ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಕುರಿತಂತೆ ನುಸ್ರತ್ ನಿಖಿಲ್ ಜೈನ್ ಜೊತೆಗಿನ ಮದುವೆಗೆ ಯಾವುದೇ ಮಾನ್ಯತೆ ಇಲ್ಲ. ಟರ್ಕಿಯಲ್ಲಿ ಮದುವೆ ನಡೆದಿದ್ದು, ಟರ್ಕಿ ಕಾನೂನಿನ ಪ್ರಕಾರ ಇದಕ್ಕೆ ಮಾನ್ಯತೆ ಇಲ್ಲ. ಭಾರತದಲ್ಲೂ ಅಧಿಕೃತವಾಗಿ ಯಾವುದೇ ಕಾನೂನಿನ ಪ್ರಕಾರ ನಾವು ಮದುವೆ ಆಗಿಲ್ಲ ನಮ್ಮದು ಲಿವ್ ಇನ್ ರಿಲೇಷನ್ ಶಿಪ್ ಅಷ್ಟೇ ಎಂದಿದ್ದರು. ಇದನ್ನೂ ಓದಿ:ಶಸ್ತ್ರ ಚಿಕಿತ್ಸೆ ನಂತರ ಅಭಿಷೇಕ್ ಫೋಟೋ ಶೇರ್