ದೀಪಿಕಾ ಕೇಸರಿ ವಿವಾದ ದಿನಕ್ಕೊಂದು ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ದೀಪಿಕಾ ಪಡುಕೋಣೆ(Deepika Padukone) ಪರ ರಮ್ಯಾ (Ramya) ಬೆಂಬಲಕ್ಕೆ ನಿಂತಿದ್ದರು. ಇದೀಗ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ (Nusrat Jahan) ಕೂಡ ದೀಪಿಕಾ ಪರ ಬ್ಯಾಟಿಂಗ್ ಮಾಡಿದ್ದಾರೆ. ಇವರಿಗೆ ಹಿಜಬ್ ಧರಿಸಿದ್ರು ಸಮಸ್ಯೆ, ಬಿಕಿನಿ ಧರಿಸಿದ್ರು ಸಹಿಸಲ್ಲ ಎಂದು ಹೇಳುವ ಮೂಲಕ ಪಠಾಣ್‌ಗೆ (Pathan) ನುಸ್ರತ್ ಬೆಂಬಲ ಸೂಚಿಸಿದ್ದಾರೆ.
Advertisement
ʻಪಠಾಣ್ʼ ಸಿನಿಮಾದ ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಪಡುಕೋಣೆ (Deepika Padukone) ಕೇಸರಿ ಬಣ್ಣ ಬಿಕಿನಿ ಧರಿಸಿ, ಕೊಂಚ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಈ ಕುರಿತು ಕಳೆದ ನಾಲ್ಕೈದು ದಿನಗಳಿಂದ ನಟಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದೀಪಿಕಾ ಕೇಸರಿ ಬಿಕಿನಿ ವಿರುದ್ಧ ಅನೇಕರು ಆಕ್ರೋಶ ಹೊರಹಾಕಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ಸಂಸದೆ ನುಸ್ರತ್ ಕೂಡ ಚಿತ್ರತಂಡದ ಪರ ನಿಂತಿದ್ದಾರೆ. ಇದನ್ನೂ ಓದಿ: ಐಶ್ವರ್ಯ ರೈ ಹೆಸರಿನಲ್ಲಿ ನಕಲಿ ಪಾಸ್‌ಪೋರ್ಟ್ ಬಳಕೆ ಮಾಡಿದ ವಿದೇಶಿಗರು ಅಂದರ್
Advertisement
Advertisement
ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇದು ಯಾರ ಸಿದ್ಧಾಂತದ ಬಗ್ಗೆ ಅಲ್ಲ. ಇದು ಅಧಿಕಾರದಲ್ಲಿರುವ ಒಂದು ಪಕ್ಷದ ಜನರ ಗುಂಪಿನವರು ಮಾಡುತ್ತಿರುವ ಯೋಜಿತ ಪಿತ್ತೂರಿ. ಇಲ್ಲಿ ಅವರು ಏನು ಮಾಡಲು ಹೋರಟಿದ್ದಾರೆ, ಈ ವಿಚಾರದಲ್ಲಿ ಆಧ್ಯಾತ್ಮಿಕ, ಧಾರ್ಮಿಕವಾದ ವಿಚಾರಗಳನ್ನು ತರುತ್ತಿದ್ದಾರೆ. ಇದಕ್ಕೆ ಬಿಜೆಪಿ (Bjp) ಸರ್ಕಾರದ ಬೆಂಬಲ ಇದೆ. ಇಲ್ಲಿ ಮಹಿಳೆಯರು ಬಿಕಿನಿ ಧರಿಸಿದರು ಸಮಸ್ಯೆ, ಹಿಜಬ್ ಧರಿಸಿದರು ಸಮಸ್ಯೆ, ಅವರಿಗೆ ಎಲ್ಲದರಲ್ಲೂ ಸಮಸ್ಯೆ ಇದೆ ಎಂದು ಹೇಳಿದ್ದಾರೆ.
Advertisement
ಭಾರತದ ಹೊಸ ಯುಗದ ಮಹಿಳೆಯರಿಗೆ ಏನು ಧರಿಸಬೇಕೆಂದು ಅವರೇ ಹೇಳುತ್ತಿದ್ದಾರೆ ಎಂದು ನುಸ್ರತ್ ಜಹಾನ್ ಹೇಳಿದರು. ಏನು ಧರಿಸಬೇಕು, ಏನು ತಿನ್ನಬೇಕು, ಹೇಗೆ ಮಾತನಾಡಬೇಕು, ಹೇಗೆ ನಡೆಯಬೇಕು, ಶಾಲೆಯಲ್ಲಿ ಏನನ್ನು ಕಲಿಯಬೇಕು, ಟಿವಿಯಲ್ಲಿ ಏನನ್ನು ನೋಡಬೇಕು ಎಂದು ಹೇಳುವ ಮೂಲಕ ಅವರು ಮಹಿಳೆಯರ ಜೀವನವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿಯ ವರ್ತನೆ ಎಲ್ಲಿಗೆ ಕೊಂಡೊಯ್ಯುತ್ತದೆ ಎಂದು ನನಗೆ ತಿಳಿದಿಲ್ಲ ಎಂದು ನುಸ್ರತ್ ಮಾತನಾಡಿದ್ದಾರೆ.