7 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ- ಮಹಿಳೆ ಸಾವು

Public TV
1 Min Read
Nutan Villa mumbai

ಮುಂಬೈ: ಖಾರ್ ಉಪನಗರದ ಪಶ್ಚಿಮ ಭಾಗದಲ್ಲಿರುವ ಏಳು ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಗುರುವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಒಬ್ಬ ಬಾಲಕಿ ಮತ್ತು ಮತ್ತೊಬ್ಬ ಮಹಿಳೆಯನ್ನು ರಕ್ಷಿಸಲಾಗಿದೆ.

ಮೃತ ಮಹಿಳೆಯನ್ನು ಹೇಮಾ ಜಗ್ವಾನಿ(40) ಎಂದು ಗುರುತಿಸಲಾಗಿದೆ. ಕಟ್ಟಡದೊಳಗೆ ಸಿಲುಕಿದ್ದ 10 ವರ್ಷದ ಬಾಲಕಿ ಮತ್ತು 45 ವರ್ಷದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುರುವಾರ ಸಂಜೆ 7 ಗಂಟೆ ವೇಳೆಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಎಂಟು ಅಗ್ನಿಶಾಮಕ ಯಂತ್ರಗಳು, ಏಳು ನೀರಿನ ಟ್ಯಾಂಕರ್ ಮತ್ತು ಇತರೆ ಸಾಧನಗಳನ್ನು ಬಳಸಿ ರಾತ್ರಿ ಸುಮಾರು11 ಗಂಟೆವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.

KARNATAKA FIRE ENGINE VEHICLE

ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಾಗ, ಕೊಠಡಿಯಲ್ಲಿ ಸಿಕ್ಕಿಕೊಂಡಿದ್ದ ಹೇಮಾ ಜಗ್ವಾನಿ ಉಸಿರುಗಟ್ಟಿ ಪ್ರಜ್ಞೆಕಳೆದುಕೊಂಡಿದ್ದರು. ನಂತರ ಅವರನ್ನು ಹಿಂದೂಜಾ ಆಸ್ಪತ್ರೆಗೆ ಕರೆತರಲಾಯಿತು. ಅವರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು. ಇದನ್ನೂ ಓದಿ: ಬೆಣ್ಣೆ ನಗರಿಯಲ್ಲಿ ವೈರಲ್ ಫೀವರ್ ಆತಂಕ-ಐಸಿಯುನಲ್ಲಿ ಮಕ್ಕಳು

ಕಟ್ಟಡದ ವಿದ್ಯುತ್ ವೈರಿಂಗ್ ಹಾದುಹೋಗುವ ಕೊಳವೆಯಲ್ಲಿ ಬೆಂಕಿ ತಗುಲಿದೆ. ಕಟ್ಟಡದ ತುಂಬಾ ಹೊಗೆ ತುಂಬಿಕೊಂಡಿದ್ದ ಕಾರಣ, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯ ವೇಳೆ ಕೃತಕ ಉಸಿರಾಟದ ಉಪಕರಣಗಳನ್ನು ಬಳಸಿ ಕಾರ್ಯಾಚರಣೆ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *