ಚಿಕ್ಕೋಡಿ: ಅಪಘಾತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಪರಿಹಾರದ ಹಣವನ್ನು ನೀಡದ ಕಾರಣ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್‍ವೊಂದನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಅಪಘಾತದಿಂದಾಗಿ ಮೃತಪಟ್ಟ ಕುಟುಂಬಕ್ಕೆ ಪರಿಹಾರದ ಹಣವನ್ನು ನೀಡದ ಕಾರಣ, ಹುಕ್ಕೇರಿ ಜೆಎಂಎಫ್‍ಸಿ ನ್ಯಾಯಾಲಯ ಬಸ್ ಜಪ್ತಿ ಮಾಡುವಂತೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಗೆ ಸೇರಿದ್ದ ಬಸ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಏನಿದು ಪ್ರಕರಣ?
2003ರಲ್ಲಿ ಸವದತ್ತಿ ತಾಲೂಕಿನ ಹಲ್ಕಿ ಕ್ರಾಸ್ ಬಳಿ, ನಿಂತಿದ್ದ ಕ್ರೂಸರ್ ವಾಹನಕ್ಕೆ ವಾಯುವ್ಯ ಸಾರಿಗೆಯ ಬಸ್ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ವಿಜಯ್ ಉಮಾರಾಣಿ (30) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಬಗ್ಗೆ ಸಾರಿಗೆ ಸಂಸ್ಥೆಯ ವಿರುದ್ಧ ಮೃತ ಕುಟುಂಬದ ಸದಸ್ಯರು ದೂರು ನೀಡಿದ್ದರು. ದೂರು ನೀಡಿದ್ದರೂ ಸಹ ಪರಿಹಾರವನ್ನು ಮೃತ ಕುಟುಂಬಕ್ಕೆ ಸಾರಿಗೆ ಸಂಸ್ಥೆ ನೀಡಿರಲಿಲ್ಲ.
ಪರಿಹಾರ ಮೊತ್ತ ನೀಡದ ಹಿನ್ನೆಲೆಯಲ್ಲಿ ಮೃತ ವಿಜಯ್ ಉಮಾರಾಣಿ ಪೋಷಕರು ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹುಕ್ಕೇರಿಯ ಜೆಎಂಎಫ್‍ಸಿ ನ್ಯಾಯಾಲಯ ಪರಿಹಾರ ಮೊತ್ತ ನೀಡಿದ ವಾಯುವ್ಯ ಸಾರಿಗೆ ಸಂಸ್ಥೆ ವಿರುದ್ಧ ಬಸ್ ಜಪ್ತಿ ಮಾಡುವಂತೆ ಆದೇಶ ನೀಡಿತ್ತು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಅನ್ನು ಜಪ್ತಿ ಮಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv